ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನ ಪರಿಷತ್‌ ಚುನಾವಣೆ | ಅಮರನಾಥ ಗೆದ್ದರೆ ಕಾರ್ಯಕರ್ತರು ಗೆದ್ದಂತೆ: ಈಶ್ವರ

Published 27 ಮೇ 2024, 15:56 IST
Last Updated 27 ಮೇ 2024, 15:56 IST
ಅಕ್ಷರ ಗಾತ್ರ

ಬೀದರ್‌: ‘ಈಶಾನ್ಯ ಪದವೀಧರ ಕ್ಷೇತ್ರದ ಚುನಾವಣೆಯಲ್ಲಿ ಅಮರನಾಥ ಪಾಟೀಲ ಅವರು ಗೆದ್ದರೆ ಬಿಜೆಪಿಯ ಕಾರ್ಯಕರ್ತರು ಗೆದ್ದಂತೆ’ ಎಂದು ಬಿಜೆಪಿ ಕಲಬುರಗಿ ವಿಭಾಗ ಸಹ ಪ್ರಭಾರಿ ಈಶ್ವರ ಸಿಂಗ್‌ ಠಾಕೂರ್‌ ಹೇಳಿದರು.

ನಗರದ ಪಕ್ಷದ ಕಚೇರಿಯಲ್ಲಿ ಸೋಮವಾರ ನಡೆದ ಚುನಾವಣಾ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಅಮರನಾಥ ಪಾಟೀಲ ಪಕ್ಷದ ನಿಷ್ಠಾವಂತ ಕಾರ್ಯಕರ್ತರು. ಈ ಕಾರಣಕ್ಕಾಗಿಯೇ ಪಕ್ಷ ಅವರನ್ನು ಕಣಕ್ಕಿಳಿಸಿದೆ. ಕಾರ್ಯಕರ್ತರು ಪ್ರತಿಯೊಬ್ಬ ಮತದಾರರನ್ನು ಭೇಟಿ ಮಾಡಿ ಬಿಜೆಪಿಗೆ ಪ್ರಥಮ ಪ್ರಾಶ್ಯಸ್ತದ ಮತ ಕೊಡಿಸಲು ಶ್ರಮಿಸಬೇಕೆಂದು ತಿಳಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷರಾದ ಶಶಿಧರ ಹೊಸಳ್ಳಿ, ರಾಜೇಂದ್ರ ಪೂಜಾರಿ, ಚುನಾವಣಾ ಸಂಚಾಲಕ ರೇವಣಸಿದ್ದಪ್ಪ ಜಲಾದೆ, ಸಹ ಸಂಚಾಲಕ ಮಹೇಶ್ ಪಾಲಕ್, ಬೀದರ್ ಉಸ್ತುವಾರಿ ರಾಜಶೇಖರ್ ನಾಗಮೂರ್ತಿ, ಪ್ರಮುಖರಾದ ರೇವಣಸಿನ, ಸುಭಾಷ್ ಮಡಿವಾಳ ಮತ್ತಿತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT