ಬೀದರ್: ‘ಪ್ರಧಾನಿ ನರೇಂದ್ರ ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣ ವಿಫಲವಾಗಿದೆ’ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಟೀಕಿಸಿದರು.

ನಗರದ ವಿಮಾನ ನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಇರಾನ್ ವಿರುದ್ಧ ಯುದ್ಧ ಆರಂಭವಾಗುವುದಕ್ಕಿಂತ ಮುಂಚೆ ಮೋದಿ ಅವರು ಇಸ್ರೇಲ್ಗೆ ಹೋಗಿದ್ದು ಏಕೆ? ಅಲ್ಲಿ ಇವರಿಗೇನಿತ್ತು ಕೆಲಸ? ಅಯಾತೊಲ್ಲಾ ಖಮೇನಿ ಅವರು ಮೃತಪಟ್ಟ ನಾಲ್ಕೈದು ದಿನಗಳ ನಂತರ ಮೋದಿ ಸಂತಾಪ ಸೂಚಿಸಿದ್ದಾರೆ ಎಂದರು.

ಎಲ್ಪಿಜಿ ಸಿಲಿಂಡರ್ ಸಮಸ್ಯೆಯಿಂದ ಹೋಟೆಲ್ಗಳು, ಕೈಗಾರಿಕೆಗಳು ಬಾಗಿಲು ಮುಚ್ಚುತ್ತಿವೆ. ಯುದ್ಧದ ಪರಿಣಾಮ ನಮ್ಮ ದೇಶದಲ್ಲಷ್ಟೇ ಏಕೆ ಆಗುತ್ತಿದೆ. ಅಮೆರಿಕ, ಇಸ್ರೇಲ್ ಹಾಗೂ ಇರಾನ್ ‘ಬೆಸ್ಟ್ ಫ್ರೆಂಡ್’ ಎಂದು ಮೋದಿ ಹೇಳುತ್ತಾರೆ. ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಸಮಸ್ಯೆ ಇಲ್ಲ ಎಂದ ಮೇಲೆ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿರುವುದು ಏಕೆ ಎಂದು ಪ್ರಶ್ನಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.