ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಕ್ತಿಶಾಲಿ ರಾಷ್ಟ್ರಕ್ಕೆ ಮೋದಿ ಗೆಲ್ಲಿಸಿ: ಶಾಸಕ ಧೀರಜ್ ಮುನಿರಾಜ್

Published 29 ಏಪ್ರಿಲ್ 2024, 16:28 IST
Last Updated 29 ಏಪ್ರಿಲ್ 2024, 16:28 IST
ಅಕ್ಷರ ಗಾತ್ರ

ಬೀದರ್: ‘ದೇಶವನ್ನು ವಿಶ್ವದ ಶಕ್ತಿಶಾಲಿ ರಾಷ್ಟ್ರವಾಗಿಸಲು ಮೋದಿ ಅವರನ್ನು ಮತ್ತೊಮ್ಮೆ ಪ್ರಧಾನಿಯಾಗಿಸಬೇಕು’ ಎಂದು ಬಿಜೆಪಿ ಯುವ ಮೋರ್ಚಾ ರಾಜ್ಯ ಘಟಕದ ಅಧ್ಯಕ್ಷ ಶಾಸಕ ಧೀರಜ್ ಮುನಿರಾಜ್ ಹೇಳಿದರು.

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದಿಂದ ಲೋಕಸಭೆ ಚುನಾವಣೆ ಅಂಗವಾಗಿ ನಗರದಲ್ಲಿ ಸೋಮವಾರ ಏರ್ಪಡಿಸಿದ್ದ ಯುವ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಸಾಧನೆಗಳನ್ನು ಮತದಾರರಿಗೆ ತಿಳಿಸಬೇಕು. ಖೂಬಾ ಅವರು ಬೀದರ್ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿಯನ್ನು ಮನವರಿಕೆ ಮಾಡಬೇಕು’ ಎಂದು ತಿಳಿಸಿದರು.

‘ಬೀದರ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಅವರ ಗೆಲುವಿಗೆ ಯುವ ಮೋರ್ಚಾ ಕಾರ್ಯಕರ್ತರು ಹಗಲಿರುಳು ಶ್ರಮಿಸಬೇಕು. ಬೀದರ್ ಕ್ಷೇತ್ರದಲ್ಲಿ ಬಿಜೆಪಿ ಪರ ಅಲೆ ಇದೆ. ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಮೂರು ಲಕ್ಷಕ್ಕೂ ಅಧಿಕ ಮತಗಳಿಂದ ಜಯ ಗಳಿಸಲಿದ್ದಾರೆ’ ಎಂದು ಹೇಳಿದರು.

‘ಹತ್ತು ವರ್ಷಗಳ ಅವಧಿಯಲ್ಲಿ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ. ಕ್ಷೇತ್ರದಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿಗಾಗಿ ಮತದಾರರು ನನಗೆ ಆಶೀರ್ವದಿಸಬೇಕು’ ಎಂದು ಬಿಜೆಪಿ ಅಭ್ಯರ್ಥಿ ಭಗವಂತ ಖೂಬಾ ಮನವಿ ಮಾಡಿದರು.

ಶಾಸಕರಾದ ಡಾ.ಶೈಲೇಂದ್ರ ಬೆಲ್ದಾಳೆ, ಶರಣು ಸಲಗರ್, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸೋಮನಾಥ ಪಾಟೀಲ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಶೇಕಾಪುರ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಜನಾರ್ದನ ರೆಡ್ಡಿ,  ಶಿವಕುಮಾರ ಸ್ವಾಮಿ, ಬಸವರಾಜ ಹಳ್ಳೆ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT