ಮೋದಿ ಬಂಡವಾಳ ಬಟ್ಟಬಯಲು: ಸಿದ್ದರಾಮಯ್ಯ

7

ಮೋದಿ ಬಂಡವಾಳ ಬಟ್ಟಬಯಲು: ಸಿದ್ದರಾಮಯ್ಯ

Published:
Updated:

ಬೀದರ್: ‘ಪ್ರಧಾನಿ ನರೇಂದ್ರ ಮೋದಿ ಸುಳ್ಳು ಭರವಸೆ ನೀಡಿ, ಜನರ ದಾರಿ ತಪ್ಪಿಸಿ ಅಧಿಕಾರಕ್ಕೆ ಬಂದಿದ್ದಾರೆ. ನಾಲ್ಕೂವರೆ ವರ್ಷಗಳ ಅವಧಿಯಲ್ಲಿ ಅವರ ಬಂಡವಾಳ ಬಟ್ಟಬಯಲಾಗಿದೆ’ ಎಂದು ವಿಧಾನಸಭೆಯ ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.

‘ಮೋದಿ ಅವರು ಕೊಟ್ಟ ಭರವಸೆಗಳು ಹುಸಿಯಾಗಿವೆ. ಕೇಂದ್ರ ಸರ್ಕಾರ ಎಲ್ಲ ರಂಗಗಳಲ್ಲೂ ಸಂಪೂರ್ಣ ವಿಫಲವಾಗಿದೆ’ ಎಂದು ಸೋಮವಾರ ಇಲ್ಲಿ ಆಯೋಜಿಸಿದ್ದ ಜನಧ್ವನಿ ಸಮಾವೇಶದಲ್ಲಿ ಆರೋಪಿಸಿದರು.

‘ಮೋದಿ ಜನರನ್ನು ಮೂರ್ಖರನ್ನಾಗಿ ಮಾಡಲು ಹೋಗಿ ಈಗ ಸ್ವತಃ ಮೂರ್ಖರಾಗುತ್ತಿದ್ದಾರೆ. ಹಿಂದಿನ ರಾಜ್ಯ ಸರ್ಕಾರ ರೈತರ ಸಹಕಾರ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಿತ್ತು. ಆದರೆ, ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳ ಸಾಲ ಮನ್ನಾಕ್ಕೆ ನೆರವು ಕೊಡಲಿಲ್ಲ’ ಎಂದು ಆಪಾದಿಸಿದರು.

‘‘ಮನ್ ಕೀ ಬಾತ್’ ಕಾಮ್ ಕೀ ಬಾತ್ ಆಗಬೇಕು. ಬಿಜೆಪಿ ಸಾಮಾಜಿಕ ನ್ಯಾಯದ ಮೊಸಳೆ ಕಣ್ಣೀರು ಸುರಿಸುತ್ತಿದೆ. ಕಾಂಗ್ರೆಸ್ ಮಾತ್ರ ಎಲ್ಲರಿಗೂ ಸಾಮಾಜಿಕ ನ್ಯಾಯ ಕೊಡುತ್ತಿದೆ’ ಎಂದು ಹೇಳಿದರು.

‘ಕಳೆದ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 9 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. ದಿನೇಶ್ ಗುಂಡೂರಾವ್ ಹಾಗೂ ಈಶ್ವರ ಖಂಡ್ರೆ ನೇತೃತ್ವದಲ್ಲಿ ಈ ಬಾರಿ ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ’ ಎಂದು ತಿಳಿಸಿದರು.

ಬರಹ ಇಷ್ಟವಾಯಿತೆ?

 • 1

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !