ಬೀದರ್: ಮುಂಬರುವ ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಅತಿ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಲು ಯುವ ಮೋರ್ಚಾ ಸಂಕಲ್ಪ ತೊಟ್ಟಿದೆ ಎಂದು ಪಕ್ಷದ ಯುವ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಚಂದ್ರಶೇಖರ ಪಾಟೀಲ ಶೇಕಾಪುರ ಹೇಳಿದರು.

ಇಲ್ಲಿಯ ಮೈಲೂರು ಕ್ರಾಸ್ನಲ್ಲಿ ಇರುವ ಕಾಜಿ ಫಂಕ್ಷನ್ ಹಾಲ್ನಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಜಿಲ್ಲಾ ಘಟಕದ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಒನ್ ಬೂತ್ ಟೆನ್ ಯುತ್’ ಘೋಷವಾಕ್ಯದಡಿ ಜಿಲ್ಲೆಯ ಪ್ರತಿ ಮಂಡಲಗಳ ವ್ಯಾಪ್ತಿಯಲ್ಲಿ ಪಕ್ಷ ಸಂಘಟನೆ ಬಲವರ್ಧನೆಗೆ ಪ್ರತಿ ಬೂತ್ನಲ್ಲಿ 10 ಕ್ರಿಯಾಶೀಲ ಯುವಕರ ತಂಡ ರಚಿಸಲಾಗುತ್ತಿದೆ ಎಂದು ತಿಳಿಸಿದರು.

ಕೋವಿಡ್ ಎರಡನೇ ಅಲೆ ವೇಳೆ ಯುವ ಮೋರ್ಚಾ ಸಹಾಯವಾಣಿ ಆರಂಭಿಸಿ ಜಿಲ್ಲೆಯ ಜನರ ಸಮಸ್ಯೆಗೆ ಸ್ಪಂದಿಸಿದೆ. ಆಹಾರ ಪೊಟ್ಟಣ, ಮಾಸ್ಕ್, ಸ್ಯಾನಿಟೈಸರ್ ವಿತರಣೆ ಮೂಲಕ ಸಾಮಾಜಿಕ ಹೊಣೆಗಾರಿಕೆ ನಿಭಾಯಿಸಿದೆ. ಸ್ವಚ್ಛತಾ ಅಭಿಯಾನ, ಮಾದಕ ವಸ್ತುಗಳ ಕುರಿತು ಜಾಗೃತಿ ಸೇರಿದಂತೆ ವಿವಿಧ ಸಾಮಾಜಿಕ ಚಟುವಟಿಕೆಗಳನ್ನು ಕೂಡ ನಡೆಸುತ್ತಿದೆ ಎಂದು ಹೇಳಿದರು.

ಇಂದು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಉನ್ನತ ಹುದ್ದೆಯಲ್ಲಿ ಇರುವ ಅನೇಕ ನಾಯಕರು ಯುವ ಮೋರ್ಚಾ ಹಿನ್ನೆಲೆಯಿಂದ ಬಂದವರೇ ಆಗಿದ್ದಾರೆ. ಯುವ ಮೋರ್ಚಾ ಕಾರ್ಯಕರ್ತರಿಗೆ ಒಳ್ಳೆಯ ಭವಿಷ್ಯ ಇದೆ ಎಂದು ಹೇಳಿದರು.

ಸಭೆಯನ್ನು ಉದ್ಘಾಟಿಸಿದ ರಾಜ್ಯ ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಡಾ. ಶೈಲೇಂದ್ರ ಬೆಲ್ದಾಳೆ ಮಾತನಾಡಿ, ಜಿಲ್ಲೆಯಲ್ಲಿ ಯುವ ಮೋರ್ಚಾ ಸಕ್ರಿಯವಾಗಿ ಕೆಲಸ ಮಾಡುತ್ತಿದೆ ಎಂದು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಯುವಕರ ಕೈಗೆ ಅಧಿಕಾರ ನೀಡುವ ಹಾಗೂ ಯುವ ನಾಯಕತ್ವವನ್ನು ಬೆಳೆಸುವ ಆಶಯ ಹೊಂದಿದ್ದಾರೆ ಎಂದು ತಿಳಿಸಿದರು.

ಬೀದರ್ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಾಬುವಾಲಿ, ಯುವ ಮೋರ್ಚಾ ರಾಜ್ಯ ಘಟಕದ ಉಪಾಧ್ಯಕ್ಷ ರಾಜಕುಮಾರ ಸಗಾಯಿ, ಕಾರ್ಯದರ್ಶಿ ಕಿರಣ ಪಾಲಂ ಮಾತನಾಡಿದರು.

ಎಸ್ಸಿ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿ ಜಯಕುಮಾರ ಕಾಂಗೆ, ಯುವ ಮೋರ್ಚಾ ರಾಜ್ಯ ಕಾರ್ಯಕಾರಿಣಿ ಸದಸ್ಯ ಕರಬಸಪ್ಪ, ವಿಭಾಗ ಸಂಘಟನಾ ಸಹ ಕಾರ್ಯದರ್ಶಿ ಸೂರ್ಯಕಾಂತ ಧೋನಿ, ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಅಶೋಕ ಹೊಕ್ರಾಣೆ, ಮಲ್ಲಿಕಾರ್ಜುನ ಕುಂಬಾರ, ಕಾರ್ಯದರ್ಶಿ ಜಗನ್ನಾಥ ಪಾಟೀಲ, ಮುಖಂಡರಾದ ಗುರುನಾಥ ಜ್ಯಾಂತಿಕರ್, ಶಶಿ ಹೊಸಳ್ಳಿ, ರಾಜಾರಾಮ ಚಿಟ್ಟಾ, ರಾಜಶೇಖರ, ಪಪ್ಪು ಪ್ರಭು ಪಟೇಲ್, ವಿಕ್ರಮ್, ಶಿವಕುಮಾರ ಸ್ವಾಮಿ, ದೀಪಕ್ ಗುಡ್ಡಾ, ರಾಜು ರೆಡ್ಡಿ ಶಹಾಬಾದ್, ಹಣಮಂತ ಬುಳ್ಳಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.