ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಿಸಿಯೂಟ ಸೇವನೆ: 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಹುಮನಾಬಾದ್ ಪಟ್ಟಣದ‌ ಆಸ್ಪತ್ರೆಗೆ ದಾಖಲು
Published 23 ಜೂನ್ 2023, 19:40 IST
Last Updated 23 ಜೂನ್ 2023, 19:40 IST
ಅಕ್ಷರ ಗಾತ್ರ

ಹುಮನಾಬಾದ್‌ (ಬೀದರ್‌ ಜಿಲ್ಲೆ): ತಾಲ್ಲೂಕಿನ ನಿಂಬೂರ್ ಸರ್ಕಾರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಮಧ್ಯಾಹ್ನದ ಬಿಸಿಯೂಟ ಸೇವಿಸಿದ್ದ 30ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಹೊಟ್ಟೆ ನೋವು ಹಾಗೂ ವಾಂತಿ ಭೇದಿ ಕಾಣಿಸಿಕೊಂಡು ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

‘ಶಾಲೆಯ ಮಕ್ಕಳು ಮಧ್ಯಾಹ್ನ ಶಾಲೆಯಲ್ಲಿ ತಯಾರಿಸಿದ ಅನ್ನ ಸಾಂಬಾರ್ ಸೇವನೆ ಮಾಡಿದ್ದರು. ನಂತರ ಸಂಜೆ 4 ಗಂಟೆ ಹೊತ್ತಿಗೆ‌ ಕೆಲವು ವಿದ್ಯಾರ್ಥಿಗಳಲ್ಲಿ ಹೊಟ್ಟೆ ನೋವು, ವಾಂತಿ–ಭೇದಿ ಕಾಣಿಸಿಕೊಂಡಿತು. ಮನೆಗೆ ತೆರಳಿದ್ದ ಇನ್ನೂ ಕೆಲವು ವಿದ್ಯಾರ್ಥಿಗಳಲ್ಲಿಯೂ ವಾಂತಿ–ಭೇದಿ ಕಾಣಿಸಿಕೊಂಡಿತ್ತು’ ಎಂದು ನಿಂಬೂರ್ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಮಹಾದೇವ ತಿಳಿಸಿದ್ದಾರೆ.

ಶಾಸಕ ಭೇಟಿ: ವಿದ್ಯಾರ್ಥಿಗಳು ವಾಂತಿ ಭೇದಿಯಿಂದ ಆಸ್ಪತ್ರೆಗೆ ದಾಖಲಾದ ಸುದ್ದಿ ತಿಳಿದು ಶಾ‌ಸಕ ಡಾ.ಸಿದ್ದಲಿಂಗಪ್ಪ ಪಾಟೀಲ, ವಿಧಾನ ಪರಿಷತ್ ಸದಸ್ಯರಾದ ಡಾ.ಚಂದ್ರಶೇಖರ ಪಾಟೀಲ‌, ಭೀಮರಾವ ಪಾಟೀಲ ಭೇಟಿ ನೀಡಿ ‌ವೈದ್ಯರೊಂದಿಗೆ ಚರ್ಚೆ ನಡೆಸಿದರು.

‘ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಇಲ್ಲ.‌ ಸಂಬಂಧಪಟ್ಟ ವೈದ್ಯರ ಜತೆ ಮಾತನಾಡಿದ್ದೇನೆ’ ಎಂದು ಶಾಸಕ ಡಾ.ಸಿದ್ದಲಿಂಗಪ್ಪ ಪಾಟೀಲ ಅವರು ಪಾಲಕರಿಗೆ ಧೈರ್ಯ ತುಂಬಿದರು.

‌‘ಊಟದ ವ್ಯತ್ಯಾಸದಲ್ಲಿ ಏರುಪೇರು ಆಗಿದ್ದರಿಂದ ಈ ಸಮಸ್ಯೆ ಆಗಿದೆ. ಭಯಪಡುವ ಯಾವುದೇ ಸಮಸ್ಯೆ ಇಲ್ಲ. ಬೇಗ ಗುಣಮುಖರಾಗಲಿದ್ದಾರೆ’ ಎಂದು ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮುಖ್ಯಾಧಿಕಾರಿ ಡಾ.ನಾಗನಾಥ ಹುಲಸೂರೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT