ಸೋಮವಾರ, ಏಪ್ರಿಲ್ 6, 2020
19 °C
ಜ್ಞಾನಸುಧಾ ವಿದ್ಯಾಲಯದಲ್ಲಿ ತಾಯಂದಿರ ದಿನಾಚರಣೆ

ಆಟ ಆಡಿ ಸಂಭ್ರಮಿಸಿದ ತಾಯಂದಿರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಇಲ್ಲಿಯ ಜ್ಞಾನಸುಧಾ ವಿದ್ಯಾಲಯದಲ್ಲಿ ತಾಯಂದಿರ ದಿನವನ್ನು ಸಂಭ್ರಮದಿಂದ ಆಚರಿಸಲಾಯಿತು.

ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ವಿದ್ಯಾಲಯದಲ್ಲಿ ವಾಸ್ಯಂಗ ಮಾಡುತ್ತಿರುವ ನರ್ಸರಿಯಿಂದ 10ನೇ ತರಗತಿವರೆಗಿನ ಮಕ್ಕಳ ತಾಯಂದಿರು ಕುರ್ಚಿ ಆಟ, ಬಾಲ್ ಎಸೆತ ಸೇರಿದಂತೆ ವಿವಿಧ ಆಟಗಳಲ್ಲಿ ಪಾಲ್ಗೊಂಡರು.

ಅತಿ ಹೆಚ್ಚು ಬಳೆ ಧರಿಸಿದ, ಉದ್ದನೆಯ ಮತ್ತು ಸಣ್ಣ ಕೂದಲು ಹೊಂದಿದ ತಾಯಂದಿರಿಗೆ ಬಹುಮಾನ ನೀಡಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಹೈದ್ರಾಬಾದ್‌ನ ಡೈವರ್‍ಸಿಟಿ ದ ಪ್ಲೇಸ್ಕೂಲ್‌ ಸಂಸ್ಥಾಪಕ ನಿರ್ದೇಶಕಿ ಮೆಹೆಕ್ ವಲೆಚಾ ಮಾತನಾಡಿ, ‘ತಾಯಂದಿರು ಮಕ್ಕಳಿಗೆ ಬಾಲ್ಯದಲ್ಲಿಯೇ ಶಿಸ್ತು, ಸಂಯಮ ಕಲಿಸಬೇಕು. ಬೇರೆಯವರನ್ನು ಗೌರವಿಸುವುದನ್ನು ಹೇಳಿಕೊಡಬೇಕು ಎಂದು ತಿಳಿಸಿದರು.

ಜ್ಞಾನಸುಧಾ ಶಿಕ್ಷಣ ಸಂಸ್ಥೆಯ ಅಧ್ಯಕ್ಷೆ ಪೂರ್ಣಿಮಾ ಜಿ. ಮಾತನಾಡಿ, ‘ಮಕ್ಕಳ ಸರ್ವತೋಮುಖ ಬೆಳೆವಣಿಗೆಯಲ್ಲಿ ಶಾಲೆಯ ಪಾತ್ರ ಎಷ್ಟು ಮುಖ್ಯವೋ, ಪಾಲಕರ ಪಾತ್ರವೂ ಅಷ್ಟೇ ಮುಖ್ಯವಾಗಿದೆ ಎಂದು ಹೇಳಿದರು.

‘ಪಾಲಕರು ಮಕ್ಕಳಿಗೆ ಒಳ್ಳೆಯ ಸಂಸ್ಕಾರ ಕೊಡಬೇಕು. ಅವರಲ್ಲಿ ಆತ್ಮವಿಶ್ವಾಸ ಬೆಳೆಸಬೇಕು. ಪಠ್ಯೇತರ ಚಟುವಟಿಕೆಗಳು ಕ್ರಿಯಾಶೀಲತೆ ಬೆಳೆಸಲು ಸಹಕಾರಿಯಾಗಿರುವ ಕಾರಣ ಶಾಲೆಯಲ್ಲಿ ನಡೆಯುವ ಪ್ರತಿಯೊಂದು ಚಟುವಟಿಕೆಯಲ್ಲಿ ಪಾಲ್ಗೊಳ್ಳುವಂತೆ ಪ್ರೋತ್ಸಾಹಿಸಬೇಕು’ ಎಂದು ಸಲಹೆ ಮಾಡಿದರು.

ಸಂಸ್ಥೆಯ ನಿರ್ದೇಶಕ ಮುನೇಶ್ವರ ಲಾಖಾ ಅವರು ಮಾತನಾಡಿ, ‘ಪಾಲಕರು ಮಕ್ಕಳಿಗೆ ಮಾನವೀಯ ಮೌಲ್ಯಗಳ ಪರಿಚಯ ಮಾಡಿಕೊಡಬೇಕು’ ಎಂದು ಹೇಳಿದರು.

ಪ್ರಾಚಾರ್ಯೆ ಸುನೀತಾ ಸ್ವಾಮಿ, ಉಪಪ್ರಾಚಾರ್ಯೆ ಕಲ್ಪನಾ, ಮೇಲ್ವಿಚಾರಕಿಯರಾದ ರಜನಿ, ಮಧು ಪಾಟೀಲ, ಗುಂಪಾ ಶಾಖೆಯ ಪ್ರಾಚಾರ್ಯೆ ಕಾವೇರಿ, ಶಿವನಗರ ಶಾಖೆಯ ಪ್ರಾಚಾರ್ಯೆ ಸುಧಾ ಉಪಸ್ಥಿತರಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು