ಪ್ರಧಾನಿಗೆ ಖೂಬಾ ಸಾಧನೆ ಪುಸ್ತಕ

7

ಪ್ರಧಾನಿಗೆ ಖೂಬಾ ಸಾಧನೆ ಪುಸ್ತಕ

Published:
Updated:
Deccan Herald

ಬೀದರ್: ಸಂಸದ ಭಗವಂತ ಖೂಬಾ ಅವರು ನವದೆಹಲಿಯಲ್ಲಿ ಈಚೆಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ನಾಲ್ಕು ವರ್ಷಗಳ ಅವಧಿಯಲ್ಲಿ ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ಕುರಿತ ಪುಸ್ತಕ ನೀಡಿದರು.

ಪ್ರಧಾನಮಂತ್ರಿ ಫಸಲ್ ಬಿಮಾ ಯಶಸ್ವಿ ಅನುಷ್ಠಾನ, ರೈಲು ಸೇವೆ, ಹೆದ್ದಾರಿಗಳ ಅಭಿವೃದ್ಧಿ ಕುರಿತು ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಅವರು, ಜಿಲ್ಲೆಯ ಅಭಿವೃದ್ಧಿಗೆ ಇನ್ನಷ್ಟು ಸಹಕಾರ ಕೊಡುವ ಭರವಸೆ ನೀಡಿದ್ದಾರೆ ಎಂದು ಖೂಬಾ ತಿಳಿಸಿದ್ದಾರೆ.

ಬೀದರ್ ಜಿಲ್ಲೆಯಲ್ಲಿ ₹10 ಸಾವಿರ ಕೋಟಿ ವೆಚ್ಚದಲ್ಲಿ ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣ ಕಾರ್ಯ ನಡೆಯುತ್ತಿದೆ. ಅನೇಕ ಹೊಸ ರೈಲುಗಳು ಸಂಚರಿಸುತ್ತಿವೆ. ಬರುವ ದಿನಗಳಲ್ಲಿ ಬೀದರ್-ಯಶವಂತಪುರ ವಯಾ ಕಲಬುರ್ಗಿ, ಬೀದರ್-ದೆಹಲಿ ಹಾಗೂ ಬೀದರ್– ಹುಬ್ಬಳ್ಳಿ ಹೊಸ ರೈಲು, ಬೀದರ್‌ನಿಂದ ನಾಗರಿಕ ವಿಮಾನಯಾನ ಸೇವೆ, ಎಫ್‍ಎಂ ಕೇಂದ್ರ ಆರಂಭ ಮತ್ತಿತರ ಅಭಿವೃದ್ಧಿ ಕಾರ್ಯಗಳಿಗೆ ಎಲ್ಲ ರೀತಿಯ ಸಹಕಾರ ನೀಡಲಾಗುವುದು ಎಂದು ತಿಳಿಸಿದ್ದಾರೆ ಎಂದು ಹೇಳಿದ್ದಾರೆ.

ಪುಸ್ತಕವು ಸಂಸದ ಖೂಬಾ ಅವರು ಕೇಂದ್ರ ಸರ್ಕಾರದ ನೆರವಿನಿಂದ ಜಿಲ್ಲೆಯಲ್ಲಿ ನಾಲ್ಕು ವರ್ಷಗಳ ಅವಧಿಯಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳ ವಿವರಗಳನ್ನು ಒಳಗೊಂಡಿದೆ ಎಂದು ಹೇಳಿಕೆ ತಿಳಿಸಿದೆ.

Tags: 

ಬರಹ ಇಷ್ಟವಾಯಿತೆ?

 • 4

  Happy
 • 1

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !