ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ತಂತ್ರಜ್ಞಾನ ವಿನಿಮಯಕ್ಕೆ ಪರಸ್ಪರ ಸಹಕಾರ: ಬೀದರ್ ವಿ.ವಿ–ನಿಫ್ಟೆಮ್ ಒಡಂಬಡಿಕೆ

Published 8 ಜನವರಿ 2024, 15:31 IST
Last Updated 8 ಜನವರಿ 2024, 15:31 IST
ಅಕ್ಷರ ಗಾತ್ರ

ಬೀದರ್: ಶಿಕ್ಷಣ, ಸಂಶೋಧನೆ, ಕೌಶಲ ಹಾಗೂ ಔದ್ಯೋಗಿಕ ಕ್ಷೇತ್ರಗಳಲ್ಲಿ ತಂತ್ರಜ್ಞಾನ ವಿನಿಮಯ ಹಾಗೂ ಪರಸ್ಪರ ಸಹಕಾರಕ್ಕಾಗಿ ಬೀದರ್ ವಿಶ್ವವಿದ್ಯಾಲಯವು ಕೇಂದ್ರ ಸರ್ಕಾರದ ಅಧೀನದ ತಮಿಳುನಾಡಿನ ತಂಜಾವೂರಿನ ರಾಷ್ಟ್ರೀಯ ಆಹಾರ ತಂತ್ರಜ್ಞಾನ, ಉದ್ಯಮಶೀಲತೆ ಹಾಗೂ ನಿರ್ವಹಣೆ ಸಂಸ್ಥೆ(ನಿಫ್ಟೆಮ್) ಜತೆ ಒಡಂಬಡಿಕೆ ಮಾಡಿಕೊಂಡಿದೆ.

ವಿಶ್ವವಿದ್ಯಾಲಯದ ಕುಲಪತಿ ಬಿ.ಎಸ್. ಬಿರಾದಾರ ಹಾಗೂ ನಿಫ್ಟೆಮ್ ನಿರ್ದೇಶಕ ಡಾ. ವಿ. ಪಳನಿಮುತ್ತು ಅವರು ತಂಜಾವೂರಿನಲ್ಲಿ ಒಡಂಬಡಿಕೆಗೆ ಸಹಿ ಹಾಕಿದರು.

ಒಡಂಬಡಿಕೆಯಿಂದ ವಿಶ್ವವಿದ್ಯಾಲಯ ವ್ಯಾಪ್ತಿಯ ಯುವಕರಿಗೆ ಆಹಾರ ತಂತ್ರಜ್ಞಾನ, ಆಹಾರ ಸಂಸ್ಕರಣೆ ಹಾಗೂ ಕೈಗಾರಿಕೆ ಕ್ಷೇತ್ರದ ಉನ್ನತ ಜ್ಞಾನ ಸಂಪಾದನೆಗೆ ಅನುಕೂಲವಾಗಲಿದೆ. ಆಹಾರ ಕ್ಷೇತ್ರದಲ್ಲಿ ವಿನೂತನ ಸಂಶೋಧನೆ ಹಾಗೂ ಉದ್ಯೋಗ ಸೃಷ್ಟಿಗೂ ಸಹಕಾರಿಯಾಗಲಿದೆ ಎಂದು ಬಿ.ಎಸ್. ಬಿರಾದಾರ ತಿಳಿಸಿದರು.

ವಿಶ್ವವಿದ್ಯಾಲಯವು ಬರುವ ದಿನಗಳಲ್ಲಿ ಇನ್ನೂ ಅನೇಕ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಿದೆ. ಬೀದರ್ ಭಾಗದ ಪ್ರಗತಿಗೆ ಶ್ರಮಿಸಲಿದೆ ಎಂದು ಹೇಳಿದರು.

ವಿಶ್ವವಿದ್ಯಾಲಯ ಈಗಾಗಲೇ ಸಿಪೆಟ್ ಜತೆ ಮಾಡಿಕೊಂಡ ಒಪ್ಪಂದದಿಂದಾಗಿ ಅನೇಕ ವಿದ್ಯಾರ್ಥಿಗಳು ಹಾಗೂ ಯುವಕರು ಪ್ಲಾಸಿಕ್ ತಂತ್ರಜ್ಞಾನದ ತರಬೇತಿಯಲ್ಲಿ ತೊಡಗಿಸಿಕೊಳ್ಳುವಂತಾಗಿದೆ ಎಂದು ತಿಳಿಸಿದರು.

ವಿಶ್ವವಿದ್ಯಾಲಯ ವ್ಯಾಪ್ತಿಯಲ್ಲಿ 124 ಕಾಲೇಜುಗಳು ಇವೆ. 2023-24ನೇ ಸಾಲಿನಲ್ಲಿ ಸ್ನಾತಕೋತ್ತರ ಪ್ರವೇಶ ಪ್ರಕ್ರಿಯೆ ಜಾರಿಯಲ್ಲಿ ಇದೆ. ಈಗಾಗಲೇ ಸಾವಿರಾರು ವಿದ್ಯಾರ್ಥಿಗಳು ಸ್ನಾತಕ ಹಾಗೂ ಸ್ನಾತಕೋತ್ತರ ಪದವಿ ಪಡೆದಿದ್ದಾರೆ ಎಂದು ಹೇಳಿದರು.

ಕೊಡಗು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಗಂಗಾಧರ, ಹಾಸನ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ತಾರಾನಾಥ, ಹಾವೇರಿ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಸುರೇಶ ಜಂಗಮಶೆಟ್ಟಿ, ಕೊಪ್ಪಳ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ರವಿ ಬಿ.ಕೆ, ಬಾಗಲಕೋಟೆ ವಿಶ್ವವಿದ್ಯಾಲಯದ ಪ್ರೊ. ಆನಂದ ದೇಶಪಾಂಡೆ ಹಾಗೂ ನಿಫ್ಟೆಮ್ ಅಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT