ಸೋಮವಾರ, ಜನವರಿ 17, 2022
18 °C

ಎನ್. ಧರ್ಮಸಿಂಗ್ ಕ್ರಿಕೆಟ್ ಟೂರ್ನಮೆಂಟ್ 11 ರಿಂದ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್‌: ಮಾಜಿ ಮುಖ್ಯಮಂತ್ರಿ ಎನ್. ಧರ್ಮಸಿಂಗ್ ಅವರ ಸ್ಮರಣಾರ್ಥವಾಗಿ ಕಾಂಗ್ರೆಸ್ ಮುಖಂಡ ಚಂದ್ರಾಸಿಂಗ್ ಅವರು ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಮನ್ನಳ್ಳಿ ಗ್ರಾಮದಲ್ಲಿ ಡಿ. 11 ರಿಂದ ಮುಕ್ತ ಕ್ರಿಕೆಟ್ ಟೂರ್ನಮೆಂಟ್ ಹಮ್ಮಿಕೊಂಡಿದ್ದಾರೆ.

ಟೂರ್ನಮೆಂಟ್‍ನಲ್ಲಿ ವಿಜೇತ ತಂಡಕ್ಕೆ ರೂ. 50 ಸಾವಿರ ಹಾಗೂ ರನ್ನರ್ ಅಪ್ ತಂಡಕ್ಕೆ ₹. 30 ಸಾವಿರ ನಗದು ಹಾಗೂ ಟ್ರೋಫಿ ನೀಡಲಾಗುವುದು. ಪಂದ್ಯ ಶ್ರೇಷ್ಠ, ಸರಣಿ ಶ್ರೇಷ್ಠ ಪ್ರಶಸ್ತಿಗಳನ್ನೂ ಕೊಡಲಾಗುವುದು ಎಂದು ಚಂದ್ರಾಸಿಂಗ್ ತಿಳಿಸಿದ್ದಾರೆ.

ಗ್ರಾಮೀಣ ಭಾಗದಲ್ಲಿ ಕ್ರೀಡೆಗೆ ಉತ್ತೇಜನ ನೀಡಲು ಹಾಗೂ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಪ್ರತಿ ವರ್ಷ ಎನ್. ಧರ್ಮಸಿಂಗ್ ಕ್ರಿಕೆಟ್ ಟೂರ್ನಮೆಂಟ್ ಆಯೋಜಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಟೆನ್ನಿಸ್ ಬಾಲ್ ಬಳಸಿ ಆಡಲಾಗುವ ಟೂರ್ನಮೆಂಟ್‍ನ ಪ್ರತಿ ಪಂದ್ಯಗಳು ತಲಾ 10 ಓವರ್‍ಗಳದ್ದಾಗಿರುತ್ತವೆ. ಅಂತರರಾಷ್ಟ್ರೀಯ ಕ್ರಿಕೆಟ್‍ನ ನಿಯಮಗಳು ಅನ್ವಯವಾಗಲಿವೆ ಎಂದು ತಿಳಿಸಿದ್ದಾರೆ.

ಟೂರ್ನಮೆಂಟ್‍ನಲ್ಲಿ ಭಾಗವಹಿಸಲು ಹೆಸರು ನೋಂದಣಿಗೆ ಡಿ. 10 ಕೊನೆಯ ದಿನವಾಗಿದೆ. ಆಸಕ್ತ ತಂಡಗಳು ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 6361664754 ಅಥವಾ 9741674961ಗೆ ಸಂಪರ್ಕಿಸಬಹುದು ಎಂದು ಹೇಳಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು