ಶನಿವಾರ, ಜನವರಿ 22, 2022
16 °C

ನಾಗಮಾರಪಳ್ಳಿ ಸಹೋದರರ ಬೆಂಬಲ: ಕೇಂದ್ರ ಸಚಿವ ಭಗವಂತನ ಖೂಬಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಔರಾದ್: ‘ಡಿಸಿಸಿ ಬ್ಯಾಂಕ್ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಹಾಗೂ ಸೂರ್ಯಕಾಂತ ನಾಗಮಾರಪಳ್ಳಿ ಅವರು ವಿಧಾನ ಪರಿಷತ್ ಚುನಾವಣೆಯ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಅವರನ್ನು ಬೆಂಬಲಿಸಲಿದ್ದಾರೆ. ಈ ಬಗ್ಗೆ ಅನುಮಾನ ಪಡುವ ಪ್ರಶ್ನೆಯೇ ಇಲ್ಲ’ ಎಂದು ಕೇಂದ್ರ ಸಚಿವ ಭಗವಂತನ ಖೂಬಾ ಹೇಳಿದರು.

ತಾಲ್ಲೂಕಿನ ಚಿಂತಾಕಿಯಲ್ಲಿ ಶನಿವಾರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ನಾಗಮಾರಪಳ್ಳಿ ಸಹೋದರರ ಜತೆ ನಾನು ಸಂಪರ್ಕದಲ್ಲಿದ್ದೇನೆ. ಹೀಗಾಗಿ ಕಾರ್ಯಕರ್ತರು ಅನುಮಾನ ಪಡಬಾರದು ಎಂದರು.

ಪಶು ಸಂಗೋಪನಾ ಸಚಿವ ಪ್ರಭು ಚವಾಣ್ ಮಾತನಾಡಿ, ನಾಗಮಾರಪಳ್ಳಿ ಸಹೋದರರು ಬಿಜೆಪಿಯಲ್ಲಿ ಇದ್ದಾರೆ. ಹೀಗಾಗಿ ಅವರು ಹೇಗೆ ಕಾಂಗ್ರೆಸ್ ಬೆಂಬಲಿಸುತ್ತಾರೆ. ಜಿಲ್ಲೆಯ ಹಿತದೃಷ್ಟಿಯಿಂದ ಮತದಾರರು ಪ್ರಕಾಶ ಖಂಡ್ರೆ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು.

ವಿಧಾನ ಪರಿಷತ್ ಚುನಾವಣೆ ಬಿಜೆಪಿ ಅಭ್ಯರ್ಥಿ ಪ್ರಕಾಶ ಖಂಡ್ರೆ ಮಾತನಾಡಿ, ‘ಇದು ನನ್ನ ಕೊನೆಯ ಚುನಾವಣೆ. ಸಾವಿನಿಂದ ಗೆದ್ದು ಬಂದಿದ್ದೇನೆ. ತಮ್ಮ ಸೇವೆ ಮಾಡಲು ಅವಕಾಶ ಕೊಡುವಂತೆ’  ‌ಮನವಿ ಮಾಡಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಶಿವಾನಂದ ಮಂಠಾಳಕರ್, ಈಶ್ವರಸಿಂಗ್ ಠಾಕೂರ್, ಅರಹಂತ ಸಾವಳೆ, ವಿಜಯಕುಮಾರ ಪಾಟೀಲ, ಗುರುನಾಥ ಕೊಳ್ಳುರ, ಪ್ರಕಾಶ ಟೊಣ್ಣೆ, ವಸಂತ ವಕೀಲ್, ರಾಮಶೇಟ್ಟಿ ಪನ್ನಾಳೆ ಇದ್ದರು.

‘ಪಂಚಾಯಿತಿ ಅಭಿವೃದ್ಧಿಗೆ ಪ್ರಾಮಾಣಿಕ ಯತ್ನ’

ಕಮಲನಗರ: ‘ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ’ ಎಂದು ಪಶು ಸಂಗೋಪನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್ ಹೇಳಿದರು.

ಪಟ್ಟಣದಲ್ಲಿ ಶನಿವಾರ ನಡೆದ ವಿಧಾನ ಪರಿಷತ್ ಚುನಾವಣೆ ಪ್ರಚಾರ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ತಾಲ್ಲೂಕಿನ ಗ್ರಾಮ ಪಂಚಾಯಿತಿಗಳ ಎಲ್ಲ ಕೇಂದ್ರಗಳಲ್ಲಿ ಬಿಜೆಪಿ ಕಾರ್ಯಕರ್ತರು ಉತ್ಸಾಹದಿಂದ ಕೆಲಸ ಮಾಡುತ್ತಿದ್ದಾರೆ. ಸರ್ಕಾರ ಸಾಧನೆಗಳು ಗೆಲುವಿಗೆ ಸೋಪಾನ’ ಎಂದರು.

ಕೇಂದ್ರ ಸಚಿವ ಭಗವಂತ ಖೂಬಾ ಮಾತನಾಡಿ, ಅಭ್ಯರ್ಥಿ ಪ್ರಕಾಶ ಖಂಡ್ರೆ ಅವರು ಎರಡು ಬಾರಿ ಭಾಲ್ಕಿಯ ಶಾಸಕರ ಚುನಾವಣೆ ಕಣದಲ್ಲಿ ಜಯಶಾಲಿಗೊಂಡು, ಗ್ರಾಮ ಪಂಚಾಯಿತಿಗಳ ಸಮಸ್ಯೆಗಳಿಗೆ ಸ್ಪಂದಿಸಿ ಸಾಕಷ್ಟು ಕೆಲಸ ಮಾಡಿದ್ದಾರೆ. ಇನ್ನಷ್ಟು ಹೆಚ್ಚಿನ ಕೆಲಸ ಮಾಡಲು ಅವರಿಗೆ ಮತ ನೀಡಬೇಕು ಎಂದರು.

ವಿಧಾನ ಪರಿಷತ್ ಅಭ್ಯರ್ಥಿ ಪ್ರಕಾಶ ಖಂಡ್ರೆ ಮಾತನಾಡಿ, ಕೇಂದ್ರದಲ್ಲಿ ಭಗವಂತ ಖೂಬಾ ಮತ್ತು ರಾಜ್ಯದಲ್ಲಿ ಪ್ರಭು ಚವಾಣ್ ಅಭಿವೃದ್ಧಿಯ ಕೆಲಸ ಮಾಡುತ್ತಿದ್ದಂತೆ ಎಂದು ತಿಳಿಸಿದರು.

ಬಿಜೆಪಿ ಜಿಲ್ಲಾ ಘಟಕ ಅಧ್ಯಕ್ಷ ಶಿವಾನಂದ ಮಂಠಾಳಕರ್, ಮುಖಂಡ ಈಶ್ವರ ಸಿಂಗ್ ಠಾಕೋರ್, ತಾಲ್ಲೂಕು ಘಟಕ ಅಧ್ಯಕ್ಷ ರಾಮಶೇಟ್ಟಿ ಪನ್ನಾಳೆ, ಪ್ರಕಾಶ ಟೊಣ್ಣೆ, ಶ್ರೀರಂಗ ಪರಿಹಾರ, ಶಿವಾನಂದ ವಡ್ಡೆ, ವಿಜಯಕುಮಾರ ಪಾಟೀಲ, ದೇವಾನಂದ ಪಾಟೀಲ, ಬಸವರಾಜ ಪಾಟೀಲ, ಸತೀಶ ಪಾಟೀಲ, ವರ್ಷಾ ಬಿರಾದಾರ, ಬಂಟಿ ರಾಂಪುರೆ, ನಾಗೇಶ ಪತ್ರೆ, ಮಲ್ಲಿಕಾರ್ಜುನ ದಾನಾ, ಅನೀಲಕುಮಾರ ಬಿರಾದಾರ, ರಾಜಕುಮಾರ ಅಲಬಿದೆ, ಸಂತೋಷ ಸೋಲ್ಲಪುರೆ, ಬಾಲಾಜಿ ತೆಲಂಗ್, ಅರಹಂತ ಸಾವಳೆ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು