ಭಾನುವಾರ, ಅಕ್ಟೋಬರ್ 2, 2022
19 °C

ಮಾಸಾಶನ ಮಂಜೂರಿಗೆ ನೆರವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ‘ಡಾ.ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ ಸಾಮಾಜಿಕ ಭದ್ರತಾ ಯೋಜನೆಗಳಡಿ ಅರ್ಹರಿಗೆ ಸೌಲಭ್ಯ ತಲುಪಿಸಲು ನೆರವಾಗುತ್ತಿದೆ’ ಎಂದು ಫೌಂಡೇಷನ್ ಅಧ್ಯಕ್ಷರೂ ಆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ತಿಳಿಸಿದ್ದಾರೆ.

ಫೌಂಡೇಷನ್‍ನಿಂದ ವಿಧವಾ ವೇತನ, ವೃದ್ಧಾಪ್ಯ ವೇತನ ಸೇರಿದಂತೆ ವಿವಿಧ ಯೋಜನೆಗಳಡಿ ಅರ್ಹರಿಗೆ ಮಾಸಾಶನ ಮಂಜೂರು ಮಾಡಿಸಲಾಗಿದೆ. ಆನ್‍ಲೈನ್‍ನಲ್ಲಿ ಅರ್ಜಿ ಸಲ್ಲಿಕೆ, ದಾಖಲೆಗಳ ಅಪ್‍ಲೋಡ್ ಸೇರಿದಂತೆ ಎಲ್ಲ ಕಾರ್ಯಗಳನ್ನೂ ಮಾಡಿಕೊಡಲಾಗಿದೆ ಎಂದು ಹೇಳಿದ್ದಾರೆ.

ಮಂಜೂರಾತಿ ಪತ್ರ ವಿತರಣೆ: ಸೂರ್ಯಕಾಂತ ನಾಗಮಾರಪಳ್ಳಿ ಅವರು ಅರ್ಹ ಫಲಾನುಭವಿಗಳಿಗೆ ಸರ್ಕಾರದ ಮಂಜೂರಾತಿ ಪತ್ರಗಳನ್ನು ವಿತರಿಸಿದರು. ಚಿಮಕೋಡ್, ಬಸಂತಪುರ, ಮಿರ್ಜಾಪುರ, ಖಾಜಾಪುರ, ಹಮಿಲಾಪುರದಲ್ಲಿ 35 ಜನರಿಗೆ ಮಾಸಾಶನ ಮಂಜೂರಾತಿ ಪತ್ರ ನೀಡಲಾಯಿತು. ಮುಖಂಡ ಫರ್ನಾಂಡಿಸ್ ಹಿಪ್ಪಳಗಾಂವ್, ತರುಣ್ ಸೂರ್ಯಕಾಂತ ನಾಗಮಾರಪಳ್ಳಿ, ಗ್ರಾಮ ಪಂಚಾಯಿತಿ ಸದಸ್ಯ ಪ್ರಕಾಶ ಕಮಠಾಣೆ, ದಿಲೀಪ್ ಕಲಬುರ್ಕೆ, ಪಿಕೆಪಿಎಸ್ ಸದಸ್ಯ ಭದ್ರೇಶ, ರಾಜಕುಮಾರ ಕಾಳೆ, ಯಲ್ಲಪ್ಪ ಮೇತ್ರೆ ಹಾಗೂ ವಿಲ್ಸನ್ ಚಿಲ್ಲರ್ಗಿ ಇದ್ದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು