ಹುಮನಾಬಾದ್ ತಾಲ್ಲೂಕಿನ ಧುಮ್ಮನಸೂರ್ ಗ್ರಾಮದಲ್ಲಿನ ನಮ್ಮೂರ ಗ್ರಂಥಾಲಯವನ್ನು ಜಿಲ್ಲಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ್ ಬದೋಲೆ ಉದ್ಘಾಟಿಸಿದರು.
ಜಿಲ್ಲೆಯಲ್ಲೇ ಮೊದಲನೇ ನಮ್ಮೂರು ಗ್ರಂಥಾಲಯ ಇದ್ದಾಗಿದೆ. ಈ ಗ್ರಂಥಾಲಯ ರಾಷ್ಟೀಯ ಹೆದ್ದಾರಿ ಪಕ್ಕದಲ್ಲಿ ಇರುವುದರಿಂದಾಗಿ ಪ್ರಯಾಣಿಕರಿಗೆ ಮತ್ತು ಗ್ರಾಮಸ್ಥರಿಗೆ ಇದರ ಅನುಕೂಲ ಆಗಲಿದೆ.
–ಡಾ.ಗಿರೀಶ್ ಬದೋಲೆ, ಜಿ.ಪಂ ಕಾರ್ಯನಿರ್ವಾಹಕ ಅಧಿಕಾರಿ
ಗ್ರಾಮೀಣ ಪ್ರದೇಶದ ಜನರಲ್ಲಿ ಪುಸ್ತಕ ಓದುವ ಅಭಿರುಚಿ ಬೆಳೆಸುವುದು ಈ ಗ್ರಂಥಾಲಯ ಸ್ಥಾಪನೆಯ ಉದ್ದೇಶವಾಗಿದೆ. ಧುಮ್ಮನಸೂರ್ ಗ್ರಾಮ ಪಂಚಾಯಿತಿ ಅಧ್ಯಕ್ಷರು ಮತ್ತು ಪಿಡಿಒ ಅವರ ಸಹಕಾರದಿಂದ ಸುಂದರ ಗ್ರಂಥಾಲಯ ಸ್ಥಾಪನೆ ಮಾಡಲಾಗಿದೆ.
–ದೀಪಿಕಾ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ
ಸ್ಪರ್ಧಾತ್ಮಕ ಪರೀಕ್ಷೆ ದಿನ ಪತ್ರಿಕೆಗಳು ಕಾದಂಬರಿ ಶರಣರ ವಚನಗಳ ಸೇರಿದಂತೆ ಎಲ್ಲ ರೀತಿಯ ಪುಸ್ತಕಗಳು ಗ್ರಂಥಾಲಯದಲ್ಲಿ ಲಭ್ಯವಿವೆ. ಗ್ರಾಮದ ವಿದ್ಯಾರ್ಥಿಗಳು ಹಿರಿಯರು ಇದರ ಸದುಪಯೋಗ ಪಡೆದುಕೊಳ್ಳಬೇಕು.