ಜನವಾಡ: ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಗೆ ಕಳೆದ ಹಂಗಾಮಿನಲ್ಲಿ ಕಬ್ಬು ಪೂರೈಸಿದ ರೈತರಿಗೆ ಕಾರ್ಖಾನೆಯಿಂದ ಪ್ರತಿ ಟನ್ಗೆ ಹೆಚ್ಚುವರಿಯಾಗಿ ₹ 50 ಹಾಗೂ ಕೆ.ಜಿ. ಸಕ್ಕರೆ ಉಚಿತವಾಗಿ ಕೊಡಲಿದೆ.

ಬೀದರ್ ತಾಲ್ಲೂಕಿನ ಜನವಾಡ ಸಮೀಪದ ಕಾರ್ಖಾನೆಯಲ್ಲಿ ಮಂಗಳವಾರ ನಡೆದ ವಾರ್ಷಿಕ ಮಹಾಸಭೆಯಲ್ಲಿ ಹಂಗಾಮಿ ಅಧ್ಯಕ್ಷ ಬಾಲಾಜಿ ಚವಾಣ್ ಹಾಗೂ ನಿರ್ದೇಶಕ ಉಮಾಕಾಂತ ನಾಗಮಾರಪಳ್ಳಿ ಈ ಘೋಷಣೆ ಮಾಡಿದರು. ಕಬ್ಬು ಸರಬರಾಜು ಮಾಡದ ಸದಸ್ಯ ರೈತರಿಗೆ ತಲಾ 2 ಕೆ.ಜಿ. ಸಕ್ಕರೆ ಕೊಡಲಾಗುವುದು. ಅಲ್ಲದೆ, ಕಾರ್ಖಾನೆ ನವೆಂಬರ್ ಮೊದಲ ವಾರದಲ್ಲಿ ಪ್ರಸಕ್ತ ಸಾಲಿನ ಕಬ್ಬು ನುರಿಸುವ ಹಂಗಾಮು ಆರಂಭಿಸಲಿದೆ ಎಂದು ತಿಳಿಸಿದರು.

‘ಒಟ್ಟು 5 ಲಕ್ಷ ಮೆಟ್ರಿಕ್ ಟನ್ ಕಬ್ಬು ನುರಿಸುವ ಗುರಿ ಇಟ್ಟುಕೊಳ್ಳಲಾಗಿದೆ. ಕಬ್ಬು ಕಟಾವು ಹಾಗೂ ಸಾಗಾಣಿಕೆ ಸಂಬಂಧ ಗುತ್ತಿಗೆದಾರರೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈಗಾಗಲೇ 33,547 ಎಕರೆ ಕಬ್ಬು ಕ್ಷೇತ್ರ ನೋಂದಣಿಯಾಗಿದೆ. ರೈತರು ತಪ್ಪದೆ ಕಾರ್ಖಾನೆಗೆ ಕಬ್ಬು ಸಾಗಿಸಿ ಸಹಕರಿಸಬೇಕು’ ಎಂದು ಮನವಿ ಮಾಡಿದರು.

‘ರೈತರ ಹಿತಕ್ಕಾಗಿ ಕಾರ್ಖಾನೆಯನ್ನು ಮುನ್ನಡೆಸಲಾಗುವುದು. ಕಾರ್ಖಾನೆ ತೊಡಕುಗಳನ್ನು ಕಾನೂನು ಮೂಲಕ ಬಗೆಹರಿಸಿಕೊಳ್ಳಲಾಗುವುದು’ ಎಂದು ತಿಳಿಸಿದರು.

ನಿರ್ದೇಶಕರಾದ ರಾಜಕುಮಾರ ಕರಂಜಿ, ಝರೆಪ್ಪ ಮಮದಾಪುರೆ, ಶಿವಬಸಪ್ಪ ಚನ್ನಮಲ್ಲೆ, ಶಶಿಕುಮಾರ ಪಾಟೀಲ ಸಂಗಮ, ಸಂಗಮೇಶ ಪಾಟೀಲ ಅಲಿಯಂಬರ, ಸಿದ್ರಾಮ ವಾಘಮಾರೆ, ವಿಜಯಕುಮಾರ ಪಿ. ಪಾಟೀಲ, ಶೋಭಾವತಿ ಪಾಟೀಲ, ಮಲ್ಲಮ್ಮ ಪಾಟೀಲ, ವೀರಶೆಟ್ಟಿ ಪಟ್ನೆ, ಸೀತಾರಾಮ ರಾಠೋಡ, ವ್ಯವಸ್ಥಾಪಕ ನಿರ್ದೇಶಕ ಸೋಮಶೇಖರ ಪಾಟೀಲ ಮೊದಲಾದವರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.