ಬೀದರ್: ಬೀದರ್ ದಕ್ಷಿಣ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿಯ ಅಧ್ಯಕ್ಷರಾಗಿ ತಾಲ್ಲೂಕಿನ ಯಾಕತಪುರ ಗ್ರಾಮದ ಯುವ ಮುಖಂಡ ನರಸಪ್ಪ ಬಿ. ಜಾನಕನೋರ ಅವರನ್ನು ನೇಮಕ ಮಾಡಲಾಗಿದೆ.
ಪಕ್ಷದ ಪ್ರಚಾರ ಸಮಿತಿಯ ಜಿಲ್ಲಾ ಘಟಕದ ಅಧ್ಯಕ್ಷ ಅಮೃತರಾವ್ ಚಿಮಕೋಡೆ ಈ ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.
ಬೀದರ್ ದಕ್ಷಿಣದಲ್ಲಿ ಪಕ್ಷದ ಪ್ರಚಾರ ಹಾಗೂ ಸಂಘಟನೆ ಬಲಪಡಿಸಲು ಶ್ರಮಿಸಬೇಕು ಎಂದು ಸೂಚಿಸಿದ್ದಾರೆ.
ನರಸಪ್ಪ ಜಾನಕನೋರ ಕಾಂಗ್ರೆಸ್‍ನ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಜಿಲ್ಲೆಯ ಪಕ್ಷದ ಹಿರಿಯ ಹಾಗೂ ಕಿರಿಯ ನಾಯಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.