ಬುಧವಾರ, 11 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆ. 20ರಂದು ನಾರಾಯಣ ಗುರು, ದೇವರಾಜ ಅರಸು ಜಯಂತಿ: ರಾಜಶೇಖರ ಸೇಡಂಕರ್

Published 16 ಆಗಸ್ಟ್ 2024, 15:18 IST
Last Updated 16 ಆಗಸ್ಟ್ 2024, 15:18 IST
ಅಕ್ಷರ ಗಾತ್ರ

ಬೀದರ್‌: ‘ಬ್ರಹ್ಮಶ್ರೀ ನಾರಾಯಣ ಗುರು ಹಾಗೂ ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜಯಂತಿ ಕಾರ್ಯಕ್ರಮವನ್ನು ಆ 20ರಂದು ನಗರದ ಡಾ. ಚನ್ನಬಸವ ಪಟ್ಟದ್ದೇವರು ರಂಗಮಂದಿರದಲ್ಲಿ ಸರಳವಾಗಿ ಆಚರಿಸಲಾಗುವುದು’ ಎಂದು ಜಿಲ್ಲಾ ಆರ್ಯ ಈಡಿಗ ಸಮಾಜದ ಜಿಲ್ಲಾಧ್ಯಕ್ಷ ಡಾ.ರಾಜಶೇಖರ ಸೇಡಂಕರ್ ತಿಳಿಸಿದರು.

ನಗರದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ಯ ಈಡಿಗ ಸಮಾಜ ಹಾಗೂ ಹಿಂದುಳಿದ ವರ್ಗಗಳ ಸಮಾಜದ ಸಹಯೋಗದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲ್ಲೂಕಿನ ಶಿರೂರನಲ್ಲಿ ಗುಡ್ಡ ಕುಸಿತದಿಂದ 7 ಜನ ಸಮಾಜದವರು ಮೃತಪಟ್ಟಿದ್ದಾರೆ. ಆದಕಾರಣ ಈ ಸಲ ರಥಯಾತ್ರೆ, ಮೆರವಣಿಗೆ ಇಟ್ಟುಕೊಂಡಿಲ್ಲ ಎಂದು ಹೇಳಿದರು.

ಅಂದು ಬೆಳಿಗ್ಗೆ 11ಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಉದ್ಘಾಟಿಸುವರು. ಪೌರಾಡಳಿತ ಸಚಿವ ರಹೀಂ ಖಾನ್, ಸಂಸದ ಸಾಗರ್‌ ಖಂಡ್ರೆ, ಬೀದರ್ ದಕ್ಷಿಣ ಶಾಸಕ‌ ಡಾ.ಶೈಲೇಂದ್ರ ಕೆ. ಬೆಲ್ದಾಳೆ ಸೇರಿದಂತೆ ಜಿಲ್ಲೆಯ ಜನಪ್ರತಿನಿಧಿಗಳು, ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸುವರು ಎಂದು ವಿವರಿಸಿದರು.

ಅಂದು ಬೆಳಿಗ್ಗೆ 10ಗಂಟೆಯಿಂದ ಪ್ರಸಾದ ಆರಂಭವಾಗಲಿದೆ. ಆರ್ಯ ಈಡಿಗ ಸಮಾಜ, ಹಿಂದುಳಿದ ವರ್ಗಗಳ ಮುಖಂಡರು, ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.

ಹಿಂದುಳಿದ ವರ್ಗಗಳ ಮುಖಂಡ ಬಸವರಾಜ ಮಾಳಗೆ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಹಾಗೂ ದೇವರಾಜ ಅರಸು ಅವರ ವಿಚಾರಧಾರೆಗಳು ಒಂದೇ ಆಗಿರುವುದರಿಂದ ಇಬ್ಬರ ಜಯಂತಿಗಳನ್ನು ಒಂದೇ ವೇದಿಕೆಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಮನ್ನಾನ್ ಸೇಠ್ ಮಾತನಾಡಿ, ಬ್ರಹ್ಮಶ್ರೀ ನಾರಾಯಣ ಗುರುಗಳು ಹಿಂದೂ, ಮುಸ್ಲಿಂ, ಸಿಖ್, ಬೌದ್ದ ಹಾಗೂ ಜೈನ್ ಎನ್ನದೆ ಎಲ್ಲರನ್ನೂ ಪ್ರೀತಿಸಿದ ಮಹಾನ ದಾರ್ಶನಿಕರು. ಅವರ ಜಯಂತಿ ಆಚರಣೆ ಅರಸರ ಜಯಂತಿಯೊಂದಿಗೆ ಸೇರಿ ಆಚರಿಸಿದರೆ ಸಮಾಜಕ್ಕೆ ಒಳ್ಳೆ ಸಂದೇಶ ರವಾನೆಯಾಗಲಿದೆ ಎಂದರು.

ಆರ್ಯ ಈಡಿಗ ಸಮಾಜದ ಮುಖಂಡರಾದ ಸುಭಾಷ ಚೌದ್ರಿ, ಸಂಗಯ್ಯ ಸುಲ್ತಾನಪುರ, ಅಶೋಕ ತೇಲಂಗ, ಚಂದ್ರಶೇಖರ ಗೌಡ, ಆನಂದ ಗೌಡ, ಅನಿಲ ಗೌಡ, ಶಂಕರರಾವ ನೇಳಗಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT