ಸೋಮವಾರ, ಅಕ್ಟೋಬರ್ 26, 2020
26 °C

ಬಸವಕಲ್ಯಾಣದಲ್ಲಿ ಶಾಸಕ ನಾರಾಯಣರಾವ್ ಅಂತ್ಯಕ್ರಿಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್‌: ಶಾಸಕ ಬಿ.ನಾರಾಯಣರಾವ್ ಅವರ ಅಂತ್ಯಕ್ರಿಯೆ ಶುಕ್ರವಾರ (ಸೆ 25) ಮಧ್ಯಾಹ್ನ 12 ಗಂಟೆಗೆ ಬಸವಕಲ್ಯಾಣದ ಸಸ್ತಾಪುರ ಬಂಗ್ಲಾ ಸಮೀಪದ ಬೊಕ್ಕೆ ಲೇಔಟ್‌ನಲ್ಲಿ ನಡೆಯಲಿದೆ.

ನಾರಾಯಣರಾವ್ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಸಾಮಾಜಿಕ ಅಂತರ ಕಾಪಾಡಿಕೊಂಡು ಕನಿಷ್ಠ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಕೋವಿಡ್ 19 ಸರ್ಕಾರಿ ಮಾರ್ಗಸೂಚಿಗಳನ್ನು ಪಾಲಿಸಿ ನೆರವೇರಿಸಲು ಕ್ರಮ ಕೈಗೊಳ್ಳುವಂತೆ ಬೀದರ್‌ ಜಿಲ್ಲಾಧಿಕಾರಿ ರಾಮಚಂದ್ರನ್‌ ಅವರಿಗೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಮೊಹಮ್ಮದ್‌ ನಯೀಮ್‌ ಮೊಮಿನ್‌ ಆದೇಶ ನೀಡಿದ್ದಾರೆ.

ಕೋವಿಡ್‌ ನಿಯಮದ ಪ್ರಕಾರ ಜಿಲ್ಲಾ ಆಡಳಿತವು ಕುಟುಂಬದ ಸದಸ್ಯರು ಸೇರಿ ಕೇವಲ 20 ಮಂದಿಗೆ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಳ್ಳಲು ಅವಕಾಶ ಕಲ್ಪಿಸಿದೆ.

ಪಾರ್ಥೀವ ಶರೀರದ ಮೆರವಣಿಗೆ ಹಾಗೂ ಅಂತಿಮ ದರ್ಶನಕ್ಕೆ ಅನುಮತಿ ಕೊಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಳ್ಳಲಾಗಿದೆ. ಅನುಮತಿ ಕೊಟ್ಟರೆ ಮಾತ್ರ ಮೆರವಣಿಗೆ ನಡೆಸಲಾಗುವುದು ಎಂದು ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ನೀಲಕಂಠ ರಾಠೋಡ್ ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು