ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಪ್ರಮಾಣ ವಚನ; ಬಿಜೆಪಿ ವಿಜಯೋತ್ಸವ

Published 9 ಜೂನ್ 2024, 16:07 IST
Last Updated 9 ಜೂನ್ 2024, 16:07 IST
ಅಕ್ಷರ ಗಾತ್ರ

ಬೀದರ್‌: ಸತತ ಮೂರನೇ ಬಾರಿಗೆ ನರೇಂದ್ರ ಮೋದಿ ಅವರು ನವದೆಹಲಿಯಲ್ಲಿ ಭಾನುವಾರ ರಾತ್ರಿ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ನಗರದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದರು.

ನಗರದ ಡಾ.ಬಿ.ಆರ್‌. ಅಂಬೇಡ್ಕರ್‌ ವೃತ್ತದಲ್ಲಿ ಸೇರಿದ ಕಾರ್ಯಕರ್ತರು, ಮೋದಿ ಪ್ರಮಾಣ ಸ್ವೀಕರಿಸುತ್ತಿದ್ದಂತೆ ಜಯಘೋಷ ಹಾಕಿದರು. ಮೋದಿಗೆ ಜಯವಾಗಲಿ, ಬಿಜೆಪಿಗೆ ಜಯವಾಗಲಿ ಎಂದು ಘೋಷಣೆ ಕೂಗಿದರು. ಪಟಾಕಿ ಸಿಡಿಸಿದರು. ಪರಸ್ಪರ ಸಿಹಿ ಹಂಚಿ ಸಂಭ್ರಮಿಸಿದರು. 

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪೀರಪ್ಪ ಔರಾದೆ, ನಗರ ಮಂಡಲ ಅಧ್ಯಕ್ಷ ಶಶಿಧರ ಹೊಸಳ್ಳಿ, ಪ್ರಮುಖರಾದ ಗುರುನಾಥ ಜ್ಯಾಂತಿಕರ್‌, ವೀರೇಶ ಸ್ವಾಮಿ, ಸುಭಾಷ ಮಡಿವಾಳ, ನಿತಿನ್ ನವಲ್ಕೆಲೆ, ರಾಜಕುಮಾರ ನೆಮತಾಬಾದ, ಸಂದೀಪ ಪಾಟೀಲ, ರೋಷನ್ ವರ್ಮಾ, ಗಣೇಶ ಭೋಸಲೆ, ಸಂಗಮೇಶ ಹುಮನಾಬಾದೆ, ಬಸವ ಮೂಲಗೆ, ವಿಜಯಕುಮಾರ ಪಾಟೀಲ, ಶಕುಂತಲಾ ಬೆಲ್ದಾಳೆ, ನಂದಕಿಶೋರ ವರ್ಮಾ ಸೇರಿದಂತೆ ಮತ್ತಿತರರು ಹಾಜರಿದ್ದರು.

ಮೂರನೇ ಸಲ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಚಿಟಗುಪ್ಪ ಪಟ್ಟಣ ಅವರ ಅಭಿಮಾನಿಗಳು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು. ಪಕ್ಷದ ಪಟ್ಟಣ ಘಟಕದ ಅಧ್ಯಕ್ಷ ಪ್ರವೀಣ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು
ಮೂರನೇ ಸಲ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಚಿಟಗುಪ್ಪ ಪಟ್ಟಣ ಅವರ ಅಭಿಮಾನಿಗಳು ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದರು. ಪಕ್ಷದ ಪಟ್ಟಣ ಘಟಕದ ಅಧ್ಯಕ್ಷ ಪ್ರವೀಣ ಸೇರಿದಂತೆ ಅನೇಕರು ಪಾಲ್ಗೊಂಡಿದ್ದರು
ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಲಸೂರು ಸಮೀಪದ ಮೆಹಕರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ ನಡೆಸಿದರು
ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ ಹುಲಸೂರು ಸಮೀಪದ ಮೆಹಕರ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ ನಡೆಸಿದರು
ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹುಲಸೂರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸುವ ಸಂಭ್ರಮಿಸಿದರು
ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆ ಹುಲಸೂರ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸುವ ಸಂಭ್ರಮಿಸಿದರು
ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿ ಹಿನ್ನೆಲೆಯಲ್ಲಿ ಹುಲಸೂರ ಸಮೀಪದ ಹಲಸಿ ತುಗಾಂವ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು
ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿ ಪ್ರಮಾಣ ವಚನ ಸ್ವೀಕರಿಸಿ ಹಿನ್ನೆಲೆಯಲ್ಲಿ ಹುಲಸೂರ ಸಮೀಪದ ಹಲಸಿ ತುಗಾಂವ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT