ಭಾನುವಾರ, ಡಿಸೆಂಬರ್ 15, 2019
18 °C

‘ರಾಷ್ಟ್ರೀಯ ಸಮ್ಮೇಳನದಲ್ಲಿ ಭಾಗವಹಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಮಲನಗರ: ಅಖಿಲ ಭಾರತ ವಿಶ್ವವಿದ್ಯಾಲಯ ಹಾಗೂ ಕಾಲೇಜು ಅಧ್ಯಾಪಕರ 30ನೇ ರಾಷ್ಟ್ರೀಯ ಸಮ್ಮೇಳನ ಡಿಸೆಂಬರ್ 7 ರಿಂದ 9ರವರೆಗೆ ಒಡಿಸ್ಸಾ ರಾಜ್ಯದ ಭುವನೇಶ್ವರದ ರೈಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಸಮ್ಮೇಳನದ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಗುಲಬರ್ಗಾ ವಿಶ್ವವಿದ್ಯಾಲಯ ಖಾಸಗಿ ಕಾಲೇಜು ಅಧ್ಯಾಪಕರ ಸಂಘದ ಪ್ರಧಾನ ಕಾರ್ಯದರ್ಶಿ ಪ್ರೊ.ಎಸ್.ಎನ್.ಶಿವಣಕರ ತಿಳಿಸಿದ್ದಾರೆ.

ಮೂರು ದಿನಗಳ ಕಾಲ ನಡೆಯುವ ಸಮ್ಮೇಳನದಲ್ಲಿ ಭಾರತದ ಉನ್ನತ ಶಿಕ್ಷಣದಲ್ಲಿ 2019ರ ರಾಷ್ಟ್ರೀಯ ಶಿಕ್ಷಣ ನೀತಿಯ ರೂಪುರೇಷೆಗಳ ಹಾಗೂ ಆಧುನಿಕ ಶಿಕ್ಷಣ ಕ್ಷೇತ್ರದಲ್ಲಿ ಆಗುವ ಬದಲಾವಣೆಗಳ ಕುರಿತು ವಿಚಾರ ಸಂಕಿರಣ, ಚಿಂತನ-ಮಂಥನ, ವಿವಿಧ ಬೌದ್ಧಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಹೀಗಾಗಿ ಗುಲಬರ್ಗಾ ವಿಶ್ವವಿದ್ಯಾಲಯದ ಅಧೀನದಲ್ಲಿ ಬರುವ ಅಧ್ಯಾಪಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಮ್ಮೇಳನ ಯಶಸ್ವಿಗೊಳಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

 

ಪ್ರತಿಕ್ರಿಯಿಸಿ (+)