ಬೀದರ್: ‘ಕಾನೂನು ಶಿಕ್ಷಣ ಹಾಗೂ ವೈದ್ಯಕೀಯ ಶಿಕ್ಷಣ ಹೊರತುಪಡಿಸಿ ರಾಷ್ಟ್ರಿಯ ಶಿಕ್ಷಣ ನೀತಿ-2020 ಅನ್ನು ಜಾರಿಗೊಳಿಸಲಾಗುವುದು’ ಎಂದು ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದರು.

ನಗರದ ಗುರುನಾನಕ್ ದೇವ ಎಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದ ರಾಷ್ಟೀಯ ಶಿಕ್ಷಣ ನೀತಿ-2020ರ ಉದ್ಘಾಟನಾ ಕಾರ್ಯಕ್ರಮದ ಬಳಿಕ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

‘ಹೊಸ ಶಿಕ್ಷಣ ನೀತಿಯಲ್ಲಿ ಕೆಲವು ಖಾಸಗಿ ಸಂಸ್ಥೆಗಳು, ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ಶಿಕ್ಷಣ ಸಂಸ್ಥೆಗಳಲ್ಲಿ ಡಿಜಿಟಲ್ ತಂತ್ರಜ್ಞಾನ ಸೌಕರ್ಯ ಒದಗಿಸಲು ಅವಕಾಶ ನೀಡಲಾಗುವುದು’ ಎಂದು ಸಚಿವರು ತಿಳಿಸಿದರು.

‘ಕಾಲೇಜುಗಳಲ್ಲಿ ಉಪನ್ಯಾಸಕರ ನೇಮಕ, ಹೊಸ ಕಾಲೇಜುಗಳ ಸ್ಥಾಪನೆ ಪ್ರಕ್ರಿಯೆಗೆ ವೇಗ ನೀಡಲಾಗುವುದು’ ಹೇಳಿದರು.

ಕೇಂದ್ರ ಸಚಿವರಾದ ಭಗವಂತ ಖೂಬಾ, ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವಾಣ್, ಶಾಸಕರಾದ ರಹೀಂ ಖಾನ್, ಶರಣು ಸಲಗರ, ಶಶಿಲ್ ನಮೋಶಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.