ಬೀದರ್: ‘ಜಿಲ್ಲೆಯಲ್ಲಿ ಮಾರ್ಚ್ 8ರಂದು ಏರ್ಪಡಿಸಿದ್ದ ರಾಷ್ಟ್ರೀಯ ಲೋಕ ಅದಾಲತ್ನಲ್ಲಿ ಒಟ್ಟು 52,812 ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ಕಕ್ಷಿದಾರರಿಗೆ ₹28.03 ಕೋಟಿ ಪರಿಹಾರ ಒದಗಿಸಲಾಗಿದೆ’ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ತಿಳಿಸಿದರು.

ನಗರದಲ್ಲಿ ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಾದ್ಯಂತ ಪೆಂಡಿಂಗ್ ಇದ್ದ 10,004 ಪ್ರಕರಣಗಳನ್ನು ಇತ್ಯರ್ಥಗೊಳಿಸಿ, ₹12.83 ಕೋಟಿ ವಸೂಲಿ ಮಾಡಿ ಪರಿಹಾರ ಕಲ್ಪಿಸಲಾಗಿದೆ. ಜಿಲ್ಲೆಯಲ್ಲಿ ಒಟ್ಟು 42,768 ವ್ಯಾಜ್ಯಪೂರ್ವ ಪ್ರಕರಣಗಳನ್ನು ಸಹ ಪರಿಹರಿಸಲಾಗಿದೆ. ₹15.20 ಕೋಟಿ ಪರಿಹಾರ ಒದಗಿಸಲಾಗಿದೆ’ ಎಂದರು.

‘ರಾಜಿ ಸಂಧಾನದ ಮೂಲಕ ಏಳು ಜೋಡಿಗಳನ್ನು ಒಂದುಗೂಡಿಸಲಾಗಿದೆ. ನ್ಯಾಯಾಲಯಗಳಲ್ಲಿ ಬಾಕಿ ಇರುವ ಒಟ್ಟು 8 ಹಳೆಯ ಪ್ರಕರಣ ಕೂಡ ಇತ್ಯರ್ಥಪಡಿಸಲಾಗಿದೆ’ ಎಂದು ವಿವರಿಸಿದರು.

ಪ್ರಾಧಿಕಾರದ ಸಿಬ್ಬಂದಿ ಜಗದೀಶ್ವರ ದೊರೆ, ಆಕಾಶ ಸಜ್ಜನಶೆಟ್ಟಿ, ನಾಗರಾಜ, ಪ್ರೀತಿ, ಜೀವನ್, ಈರಮ್ಮ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.