ಬೀದರ್: ‘ಈ ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ 40ರಷ್ಟು ಮಕ್ಕಳಿದ್ದಾರೆ. ಅವರ ಅಭಿವೃದ್ಧಿಯಿಂದ ದೇಶದ ಅಭಿವೃದ್ಧಿ ಸಾಧ್ಯ. ಆದಕಾರಣ ಎಲ್ಲ ಇಲಾಖೆಗಳು ಮಕ್ಕಳ ಹಕ್ಕುಗಳ ರಕ್ಷಣೆಗೆ ಶ್ರಮಿಸಬೇಕು’ ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಸೂಚಿಸಿದರು.

ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ಆಯೋಗ, ಮಕ್ಕಳ ರಕ್ಷಣಾ ನಿರ್ದೇಶನಾಲಯ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಡಳಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಾಲಾ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಮಹಿಳಾ ರಕ್ಷಣಾ ಘಟಕದ ಸಹಯೋಗದಲ್ಲಿ ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಸೋಮವಾರ ಏರ್ಪಡಿಸಿದ್ದ ಮಕ್ಕಳೊಂದಿಗೆ ಸಂವಾದ ಮತ್ತು ಅಹವಾಲು ಸ್ವೀಕಾರ ಕಾರ್ಯಕ್ರಮದಲ್ಲಿ ಮಾತನಾಡಿದರು.

ದೇಶದ ಕಟ್ಟಕಡೆಯ ಮಗುವಿನ ಪೋಷಣೆ, ರಕ್ಷಣೆಗೆ ವಿಶ್ವಸಂಸ್ಥೆಯೊಂದಿಗೆ ಭಾರತ ಒಡಂಬಡಿಕೆ ಮಾಡಿಕೊಂಡಿದೆ. ಅದರ ಪ್ರಕಾರ ಮಾನವ ಕಳ್ಳಸಾಗಣಿಕೆ ತಡೆ, ಮಕ್ಕಳ ಮೇಲಿನ ದೌರ್ಜನ್ಯ ತಡೆ, ಬಾಲಾಪರಾಧ ನಿಯಂತ್ರ' ಮಕ್ಕಳ ಹಕ್ಕುಗಳ ರಕ್ಷಣೆ ಸೇರಿದಂತೆ 12 ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಎಲ್ಲೂ ಮಕ್ಕಳ ಮೇಲೆ ದೌರ್ಜನ್ಯ, ಅನ್ಯಾಯ ನಡೆಯದಂತೆ ಕಠಿಣ ಕಾನೂನುಗಳು ಜಾರಿಯಲ್ಲಿವೆ. ಆದರೆ, ತಳಮಟ್ಟದಲ್ಲಿ ಇವುಗಳ ಅನುಷ್ಠಾನದ ಬಗ್ಗೆ ಅನುಮಾನ ಮೂಡುತ್ತಿದೆ ಎಂದರು.

ದೇಶದಲ್ಲಿ ಪ್ರತಿ ಒಂದು ನಿಮಿಷಕ್ಕೆ ಮೂರು ಬಾಲ್ಯ ವಿವಾಹಗಳು ಜರುಗುತ್ತಿವೆ. ಚಂದ್ರನ ಮೇಲೆ ಮಾನವ ಹೋಗಿದ್ದಾನೆ. ಸಾಕಷ್ಟು ಪ್ರಗತಿ ಸಾಧಿಸಿದ್ದಾನೆ. ಆದರೆ, ಅನಿಷ್ಠ ಪದ್ಧತಿಗಳನ್ನು ಬುಡಮೇಲು ಕಿತ್ತು ಹಾಕಲು ಸಾಧ್ಯವಾಗಿಲ್ಲ. ಕಳೆದ 3ರಿಂದ 4 ವರ್ಷಗಳಲ್ಲಿ 1.50 ಲಕ್ಷ ಅಪ್ರಾಪ್ತ ಹೆಣ್ಣು ಮಕ್ಕಳು ಗರ್ಭಧಾರಣೆ ಮಾಡಿದ್ದಾರೆ. ಇದನ್ನು ತಡೆಗಟ್ಟಲು ಸ್ವತಃ ಮುಖ್ಯಮಂತ್ರಿಯವರೇ ಸೂಚಿಸಿದ್ದರೂ ಕಡಿವಾಣ ಬೀಳದಿರುವುದು ದುರದೃಷ್ಟಕರ ಎಂದು ಹೇಳಿದರು.

ಜಿಲ್ಲೆಯಲ್ಲಿ ಸುಮಾರು ಒಂದು ಲಕ್ಷ ಮಕ್ಕಳು ಆಧಾರ್ ಕಾರ್ಡ್ ಅಪ್ಡೇಟ್ ಮಾಡಿಸಲು ಸಾಧ್ಯವಾಗಿಲ್ಲ. ಇದರಿಂದ ಅವರಿಗೆ ಸ್ಕಾಲರ್ಶಿಪ್ ಸಮಸ್ಯೆಯಾಗುತ್ತಿದೆ. ಈ ರೀತಿ ಅನೇಕ ಸಮಸ್ಯೆಗಳನ್ನು ಮಕ್ಕಳು ಎದುರಿಸುತ್ತಿದ್ದಾರೆ. ಹೀಗಾಗಿ ನೇರ ಅವರೊಂದಿಗೆ ಸಂವಾದ ನಡೆಸಿ, ಸಮಸ್ಯೆ ಅರಿತು ಪರಿಹಾರ ಸೂಚಿಸಲು ರಾಜ್ಯದಾದ್ಯಂತ ಈ ಕಾರ್ಯಕ್ರಮ ನಡೆಸಲಾಗುತ್ತಿದೆ ಎಂದು ಹೇಳಿದರು.

ಹಿರಿಯ ಸಿವಿಲ್ ನ್ಯಾಯಾಧೀಶರೂ ಆದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪ್ರಕಾಶ ಬನಸೋಡೆ ಮಾತನಾಡಿ, ಸಂವಿಧಾನದಲ್ಲಿ ಮಕ್ಕಳ ರಕ್ಷಣೆಯ ಉಲ್ಲೇಖವಿದ್ದು, ಅದಕ್ಕಾಗಿ ಕಾನೂನು ಸಹ ಇದೆ. ಮಕ್ಕಳ ಹಕ್ಕುಗಳ ಉಲ್ಲಂಘನೆ ಆಗದಂತೆ ನೋಡಿಕೊಳ್ಳಬೇಕು ಎಂದರು.

ಮಕ್ಕಳ ಪರವಾಗಿ ಅನೇಕ ಕಾನೂನುಗಳಿದ್ದರೂ, ರಕ್ಷಣಾ ಘಟಕಗಳಿದ್ದರೂ ಸಹ ಅನೇಕ ಪ್ರಕರಣಗಳು ದಾಖಲಾಗುತ್ತಿವೆ. ಬೀದರ್ ಜಿಲ್ಲೆಯಲ್ಲಿ ಅನೇಕ ಬಾಲ್ಯವಿವಾಹ ತಡೆಯಲಾಗಿದೆ. ಅನೇಕ ಕಡೆ ಬಾಲ ಕಾರ್ಮಿಕರನ್ನು ರಕ್ಷಿಸಲಾಗಿದೆ, ಮಕ್ಕಳಿಗೆ ಶಿಕ್ಷಣದ ಹಕ್ಕು ದೊರೆಯಬೇಕು. ಬಡತನ ನಿರುದ್ಯೋಗದಿಂದ ಅನೇಕ ಸಮಸ್ಯೆಗಳು ಉದ್ಭವವಾಗುತ್ತಿವೆ. ಲೈಂಗಿಕ ದೌರ್ಜನ್ಯ ಪ್ರಕರಣಗಳು ಸಹ ದಾಖಲಾಗಿವೆ. ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬ ಅಧಿಕಾರಿಯ ಜವಾಬ್ದಾರಿ ಎಂದು ಹೇಳಿದರು.

ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಅಧ್ಯಕ್ಷೆ ರಜಿಯಾ ಬಳಬಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶ್ರೀಧರ ಎಸ್.ಎಂ., ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಗುರುರಾಜ, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಲೀಂ ಪಾಶಾ, ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಮಾಜಿ ಸದಸ್ಯ ರಾಘವೇಂದ್ರ, ಜಿಲ್ಲಾ ಮಕ್ಕಳ ರಕ್ಷಣಾ ಸಮಿತಿ ಸದಸ್ಯ ಗೌರಿಶಂಕರ ಹಾಜರಿದ್ದರು.

ವಿದ್ಯಾರ್ಥಿಗಳೊಂದಿಗೆ ಸಂವಾದ

ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಶಶಿಧರ ಕೋಸಂಬೆ ಅವರು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು.

ಶೋಯೆಬ್ ಎಂಬ ವಿದ್ಯಾರ್ಥಿ ಮಾತನಾಡಿ, 1098 ಸಹಾಯವಾಣಿಗೆ ಕರೆ ಮಾಡಿ ಸಮಸ್ಯೆ ಹೇಳಿಕೊಂಡರೆ ಸ್ಪಂದಿಸಿಲ್ಲ. 112ಗೂ ಕರೆ ಮಾಡಿದೂ ಪ್ರಯೋಜನವಾಗಿಲ್ಲ ಎಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಶಶಿಧರ ಕೋಸಂಬೆ, ‘ಸಹಾಯವಾಣಿ ಜಿಲ್ಲಾ ಸಂಯೋಜಕರಿಗೆ ತಕ್ಷಣವೇ ಷೋಕಾಸ್ ನೋಟಿಸ್ ಕೊಡಬೇಕು. ಎರಡು ದಿನಗಳ ಒಳಗೆ ಉತ್ತರ ಪಡೆಯಬೇಕು. ಸಹಾಯವಾಣಿ ಇಡೀ ದೇಶದಲ್ಲಿ ಉತ್ತಮ ಹೆಸರು ಪಡೆದಿದೆ. ಇಲ್ಲೇಕೆ ಹೀಗಾಗಿದೆ ಗೊತ್ತಾಗಿಲ್ಲ. ಕಾರಣ ಪತ್ತೆ ಹಚ್ಚಿ ಸರಿಪಡಿಸಲಾಗುವುದು ಎಂದು ವಿದ್ಯಾರ್ಥಿಗೆ ಆಶ್ವಾಸನೆ ನೀಡಿದರು.

ವಿದ್ಯಾರ್ಥಿಗಳ ಕೆಲ ಆಯ್ದ ಪ್ರಶ್ನೋತ್ತರ ವಿವರ ಇಂತಿದೆ.

* ದಿವ್ಯಾ ಕೌಡಗಾಂವ್ – ನಮ್ಮೂರಿನ ಬಸ್ ನಿಲ್ದಾಣದಲ್ಲಿ ಸಾರಿಗೆ ಸಂಸ್ಥೆ ಬಸ್ ನಿಲ್ಲಿಸಲ್ಲ. 1098ಕ್ಕೆ ಕರೆ ಮಾಡಿದರೆ ಡಿಪೋಗೆ ಹೋಗಬೇಕು ಅಂತ ಹೇಳುತ್ತಾರೆ ಎಂದರು. ಈ ವೇಳೆ ಸಾರಿಗೆ ಸಂಸ್ಥೆಯ ಅಧಿಕಾರಿ, ‘ನಾನು ಆ ರೀತಿ ಹೇಳಿಯೇ ಇಲ್ಲ’ ಎಂದು ಸಮಜಾಯಿಷಿ ನೀಡಲು ಮುಂದಾದರು. ಕೋಸಂಬೆ ಮಧ್ಯ ಪ್ರವೇಶಿಸಿ, ‘ಮಕ್ಕಳಿಗೆ ಭಯ ಮೂಡಿಸಬಾರದು. ಯಾವುದೇ ಮಕ್ಕಳಿಗೆ ಬಸ್ಗಳ ತೊಂದರೆ ಉಂಟಾಗಿ, ಅವರ ಓದಿಗೆ ತೊಡಕಾಗಬಹುದು. ಸಾರಿಗೆ ಇಲಾಖೆಯ ಅಧಿಕಾರಿಗಳು ಇದನ್ನು ಗಂಭೀರವಾಗಿ ತೆಗೆದುಕೊಂಡು ಸಮಸ್ಯೆ ಬಗೆಹರಿಸಬೇಕು ಎಂದು ಸೂಚಿಸಿದರು.

* ವಿಜಯಲಕ್ಷ್ಮಿ ಧನ್ನೂರ – ನಮ್ಮೂರಿನಲ್ಲಿ ಬಾಲ್ಯ ವಿವಾಹ ನಡೆಯುತ್ತಿರುವ ವಿಚಾರ ತಿಳಿದು ಅಧಿಕಾರಿಗಳು ಬಂದಿದ್ದರು. ಮದುವೆ ಮಾಡಿಸಿ, ಆದರೆ, 18 ವರ್ಷ ತುಂಬಿದ ನಂತರ ಗಂಡನ ಮನೆಗೆ ಕಳಿಸಿಕೊಡಿ ಎಂದು ಹೇಳಿದ್ದರು. ಅಧಿಕಾರಿಗಳು ಹೋದ ನಂತರ ಮದುವೆಯಾಯ್ತು ಎಂದು ಗಮನ ಸೆಳೆದರು. ‘ಇದು ತಪ್ಪು. ಈ ರೀತಿ ಮಾಡಲು ಅವಕಾಶ ಇಲ್ಲ. ಸಂಬಂಧಿಸಿದ ಅಧಿಕಾರಿಗಳಿಂದ ಮಾಹಿತಿ ಪಡೆದು ಕ್ರಮ ಜರುಗಿಸಲಾಗುವುದು’ ಎಂದು ಕೋಸಂಬೆ ಭರವಸೆ ನೀಡಿದರು.

* ಅರ್ಷದ್, ಬೀದರ್ – ಬಾಲ ಕಾರ್ಮಿಕ ಮಕ್ಕಳಿಗೆ ಶಾಲೆಗೆ ಸೇರಿಸಲು ಏನು ಮಾಡುತ್ತೀರಿ?

‘ಬಾಲ ಕಾರ್ಮಿಕರ ಪತ್ತೆ ಟಾಸ್ಕ್ಫೋರ್ಸ್ ಇದೆ. ಎಲ್ಲಾದರೂ 18 ವರ್ಷದೊಳಗಿನ ಮಕ್ಕಳು ಕೆಲಸ ಮಾಡುತ್ತಿರುವುದು ಗೊತ್ತಾದರೆ 1098ಕ್ಕೆ ಕರೆ ಮಾಡಿ ತಿಳಿಸಿದರೆ ಕ್ರಮ ಜರುಗಿಸಲಾಗುವುದು. ಅವರ ಓದಿಗೂ ವ್ಯವಸ್ಥೆ ಮಾಡಲಾಗುವುದು’ ಎಂದು ಕೋಸಂಬೆ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.