ಎನ್‌ಡಿಎ ಪರೀಕ್ಷೆಯಲ್ಲಿ ಉತ್ತೀರ್ಣ: ವಿದ್ಯಾರ್ಥಿಗಳ ಸನ್ಮಾನ

ಬೀದರ್: ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಾದ ತಿಲಕ್ ಹಾಗೂ ನಾಗರಾಜ್ ಎನ್‌ಡಿಎ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಗಮನಾರ್ಹ ಸಾಧನೆ ಮಾಡಿದ್ದಾರೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್.ಹೇಳಿದರು.
ಇಲ್ಲಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಭಾಲ್ಕಿ ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಸತಿ ವಿಜ್ಞಾನ ಕಾಲೇಜಿನ ವಿದ್ಯಾರ್ಥಿಗಳಾದ ತಿಲಕ್, ನಾಗರಾಜ್ ಅವರನ್ನು ಸನ್ಮಾನಿಸಿ ಮಾತನಾಡಿದರು.
ಹಿರೇಮಠದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನಸೀಮಾ, ಬಸವಕಲ್ಯಾಣ ಉಪ ವಿಭಾಗಾಧಿಕಾರಿ ಭುವನೇಶ ಪಾಟೀಲ, ಬೀದರ್ ಉಪ ವಿಭಾಗಾಧಿಕಾರಿ ಗರೀಮಾ ಪನ್ವಾರ್, ಐಎಎಸ್ ಪ್ರೊಬೆಷನರಿ ಅಧಿಕಾರಿ ಕೀರ್ತನಾ, ಹೆಚ್ಚುವರಿ ಜಿಲ್ಲಾಧಿಕಾರಿ ರುದ್ರೇಶ ಘಾಳಿ, ಬಾಲ ನ್ಯಾಯ ಮಂಡಳಿ ಸದಸ್ಯ ಶಶಿಧರ ಕೋಸಂಬೆ, ಆಡಳಿತಾಧಿಕಾರಿ ಮೋಹನರೆಡ್ಡಿ, ಪ್ರಾಚಾರ್ಯ ಬಸವರಾಜ್ ಮೊಳಕೀರೆ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.