ಬುಧವಾರ, ಮಾರ್ಚ್ 22, 2023
21 °C

ಎನ್‌ಡಿಎ ಪರೀಕ್ಷೆ: ತಿಲಕ್‌, ನಾಗರಾಜ್‌ ಉತ್ತೀರ್ಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ತಾಲ್ಲೂಕಿನ ಕರಡ್ಯಾಳದ ಶ್ರೀ ಚನ್ನಬಸವೇಶ್ವರ ಗುರುಕುಲ ವಿಜ್ಞಾನ ಕಾಲೇಜಿನ ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ತಿಲಕ್‌ ಮತಗೊಂಡೆ, ನಾಗರಾಜ್‌ ಆರ್‌.ಹಾಲಿಮನಿ ಅವರು ಕೇಂದ್ರ ಲೋಕ ಸೇವಾ ಆಯೋಗ ನಡೆಸಿದ ರಾಷ್ಟ್ರೀಯ ರಕ್ಷಣಾ ಸಂಸ್ಥೆ(ಎನ್‌ಡಿಎ)ಯ ಲಿಖಿತ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ಸಾಧನೆ ಮಾಡಿದ್ದಾರೆ ಎಂದು ಪ್ರಾಚಾರ್ಯ ಬಸವರಾಜ್‌ ಮೊಳಕೀರೆ ತಿಳಿಸಿದ್ದಾರೆ.

ವಿದ್ಯಾರ್ಥಿ ತಿಲಕ್‌, ಎನ್‌ಡಿಎದ ನೌಕಾದಳ, ನಾಗರಾಜ್‌ ವಾಯುದಳ ವಿಭಾಗಕ್ಕೆ ಸೇರಲು ಆಸಕ್ತಿ ಹೊಂದಿದ್ದು, ಮುಂದಿನ ಹಂತದ ಪರೀಕ್ಷೆಗಳಿಗೆ ಅರ್ಹತೆ ಗಿಟ್ಟಿಸಿದ್ದಾರೆ. ಕಳೆದ ಏಪ್ರಿಲ್‌ 18ರಂದು ಕೇಂದ್ರ ಲೋಕ ಸೇವಾ ಆಯೋಗವು ಈ ಪರೀಕ್ಷೆ ನಡೆಸಿತ್ತು. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ ಡಾ.ಬಸವಲಿಂಗ ಪಟ್ಟದ್ದೇವರು, ಗುರುಬಸವ ಪಟ್ಟದ್ದೇವರು, ಮಹಾಲಿಂಗ ಸ್ವಾಮೀಜಿ, ಮೋಹನರೆಡ್ಡಿ ಹರ್ಷ ವ್ಯಕ್ತಪಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.