ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲಿಂಗಾಯತಕ್ಕೆ ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ಅತ್ಯವಶ್ಯ: ಬಸವಲಿಂಗ ಪಟ್ಟದ್ದೇವರು

Last Updated 21 ನವೆಂಬರ್ 2020, 2:57 IST
ಅಕ್ಷರ ಗಾತ್ರ

ಭಾಲ್ಕಿ: ಲಿಂಗಾಯತರ ಸಮಗ್ರ ಅಭಿವೃದ್ಧಿ ಆಗಬೇಕಾದರೆ ಲಿಂಗಾಯತ ಧರ್ಮಕ್ಕೆ ಕೇಂದ್ರ ಸಕಾ೯ರದಿಂದ ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ಸಿಗುವುದು ಅತ್ಯವಶ್ಯಕವಾಗಿದೆ ಎಂದು ಅನುಭವ ಮಂಟಪದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ವೀರಶೈವ- ಲಿಂಗಾಯತ ಅಭಿವೃದ್ಧಿ ನಿಗಮದ ಘೋಷಣೆ ಮಾಡಿದ ನಂತರ ಪತ್ರಿಕೆ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ವಿಧ- ವಿಧವಾದ ಚರ್ಚೆ ನಡೆಯುತ್ತಿವೆ. ಅಭಿವೃದ್ಧಿ ನಿಗಮ ಹಾಗೂ ಮೀಸಲಾತಿಯ ಬೇಡಿಕೆಯನ್ನು ಲಿಂಗಾಯತರಲ್ಲಿರುವ ಬಡವರ, ಹಿಂದುಳಿದವರ ಪ್ರಗತಿಯ ಉದ್ದೇಶ ಹೊಂದಿದೆ. ಆದರೆ ಜೈನ್, ಬೌದ್ಧ, ಸಿಖ್ ಧರ್ಮಗಳಿಗೆ ಹೇಗೆ ಕೇಂದ್ರ ಸಕಾ೯ರ ಅಲ್ಪಸಂಖ್ಯಾತರೆಂದು ಗುರುತಿಸಿ, ಅವರ ಸಮಗ್ರ ಅಭಿವೃದ್ಧಿಗೆ ಮುಂದಾಗಿದೆ. ಆ ದಿಸೆಯಲ್ಲಿ ಲಿಂಗಾಯತರ ಪ್ರಗತಿಗಾಗಿ ಅಷ್ಟೇ ಅಲ್ಲದೆ ಬಸವಾದಿ ಶರಣರ ವಿಶ್ವಮಾನ್ಯ ತತ್ವಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ನಮ್ಮ ಅಸ್ಮಿತೆಯ ಉಳಿವಿಗಾಗಿ ಅಲ್ಪಸಂಖ್ಯಾತರ ಮಾನ್ಯತೆ ಅವಶ್ಯವಾಗಿದ್ದು, ರಾಜ್ಯದ ಮುಖ್ಯಮಂತ್ರಿ, ಜನಪ್ರತಿನಿಧಿಗಳು ಈ ವಿಷಯವನ್ನು ಕೇಂದ್ರ ಸಕಾ೯ರಕ್ಕೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳುವ ಲಿಂಕ್:ಆಂಡ್ರಾಯ್ಡ್ ಆ್ಯಪ್|ಐಒಎಸ್ ಆ್ಯಪ್

ರಾಜ್ಯದಲ್ಲಿ ಹಾಗೂ ಕೇಂದ್ರದಲ್ಲಿ ಒಂದೇ ಪಕ್ಷದ ಸಕಾ೯ರ ಇರುವುದರಿಂದ ಲಿಂಗಾಯತರ ಸಮಗ್ರ ಅಭಿವೃದ್ಧಿಯನ್ನು ಬಯಸುವ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರು ಈ ವಿಷಯವನ್ನು ಕೇಂದ್ರದ ರಾಷ್ಟ್ರೀಯ ನೇತಾರರಿಗೆ ಮನವರಿಕೆ ಮಾಡಿಕೊಟ್ಟರೆ ಅವರು ಲಿಂಗಾಯತರಿಗೆ ಅಲ್ಪಸಂಖ್ಯಾತರ ಮಾನ್ಯತೆ ಕೊಡುತ್ತಾರೆ ಎಂಬ ನಂಬಿಕೆ ನಮಗಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT