ಮಂಗಳವಾರ, ಮೇ 18, 2021
28 °C

ನೀಟ್– ಜೆಇಇ ಪರೀಕ್ಷೆ ಮುಂದೂಡಲು ಆಗ್ರಹಿಸಿ ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ನೀಟ್ ಮತ್ತು ಜೆಇಇ ಪರೀಕ್ಷೆ ಮುಂದೂಡಬೇಕು’ ಎಂದು ಒತ್ತಾಯಿಸಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (ಎನ್ಎಸ್‌ಯುಐ) ಕಾರ್ಯಕರ್ತರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ರೇಸ್‌ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನ ಎದುರು ಸೇರಿದ್ದ ಕಾರ್ಯಕರ್ತರು, ‘ಪರೀಕ್ಷೆ ಮುಂದೂಡಿ’ ಎಂಬ ಘೋಷಣಾ ಫಲಕ ಪ್ರದರ್ಶಿಸಿದರು.

‘ಕೊರೊನಾ ಬಿಕ್ಕಟ್ಟಿನ ನಡುವೆಯೇ ಕೇಂದ್ರ ಸರ್ಕಾರವು ನೀಟ್ ಹಾಗೂ ಜೆಇಇ ಪರೀಕ್ಷೆ ಮಾಡುತ್ತಿರುವುದು ಖಂಡನೀಯ. ಈಗ ಪರೀಕ್ಷೆ ನಡೆಸುವುದರಿಂದ ಬೇರೆ ರಾಜ್ಯದ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುಲು ತೊಂದರೆ ಆಗಲಿದೆ. ಬಡ ಮಕ್ಕಳು ಉಳಿದುಕೊಳ್ಳಲು ಸಹ ಸಮಸ್ಯೆ ಉಂಟಾಗಲಿದೆ’ ಎಂದು ಪ್ರತಿಭಟನಾಕಾರರು ತಿಳಿಸಿದರು.

‘ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ, ಪರೀಕ್ಷೆಯನ್ನು ಮುಂದೂಡಬೇಕು’ ಎಂದು ಅವರು ಒತ್ತಾಯಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು