ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌ | ಬಾಲಕಿ ಸಾವಿನ ತನಿಖೆಗೆ ನಿರ್ಲಕ್ಷ್ಯ; ಪಿಎಸ್‌ಐ ಅಮಾನತು

Published 6 ಅಕ್ಟೋಬರ್ 2023, 5:07 IST
Last Updated 6 ಅಕ್ಟೋಬರ್ 2023, 5:07 IST
ಅಕ್ಷರ ಗಾತ್ರ

ಬೀದರ್‌: ಅಪ್ರಾಪ್ತ ಬಾಲಕಿಯ ಅಸ್ವಾಭಾವಿಕ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಲಕ್ಷ್ಯ ತೋರಿದ ಹಿನ್ನೆಲೆಯಲ್ಲಿ ಬೆಮಳಖೇಡ ಠಾಣೆಯ ಪೊಲೀಸ್‌ ಸಬ್‌ ಇನ್‌ಸ್ಪೆಕ್ಟರ್‌ ರಾಚಯ್ಯ ಮಠಪತಿ ಅವರನ್ನು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಚನ್ನಬಸವಣ್ಣ ಎಸ್‌.ಎಲ್‌. ಅಮಾನತುಗೊಳಿಸಿದ್ದಾರೆ.

‘ಅಪ್ರಾಪ್ತ ಬಾಲಕಿ ಅಸಹಜ ಸಾವಿನ ಕುರಿತು ಅವರ ಕುಟುಂಬದವರು ಠಾಣೆಗೆ ದೂರು ಕೊಡಲು ಬಂದಿದ್ದರು. ಆದರೆ, ಆ ದೂರನ್ನು ಸ್ವೀಕರಿಸಿ, ಘಟನಾ ಸ್ಥಳಕ್ಕೆ ಹೋಗಿ ಸೂಕ್ತ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ್ದಾರೆ ಎಂದು ಡಿವೈಎಸ್‌ಪಿ ವರದಿ ಕೊಟ್ಟಿದ್ದಾರೆ. ಅದನ್ನು ಆಧರಿಸಿ ರಾಚಯ್ಯ ಮಠಪತಿ ಅವರನ್ನು ಅಮಾನತುಗೊಳಿಸಲಾಗಿದೆ’ ಎಂದು ಎಸ್ಪಿ ಚನ್ನಬಸವಣ್ಣ ಎಸ್‌.ಎಲ್‌. ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ.

ಆ. 17ರಂದು ಬಾಲಕಿ ಸಾವನ್ನಪ್ಪಿದ್ದಳು. ಯುವಕನೊಬ್ಬನ ಕಿರುಕುಳಕ್ಕೆ ಮಗಳು ಸಾವನ್ನಪ್ಪಿದ್ದಾಳೆ ಎಂದು ಪೋಷಕರು ಆರೋಪಿಸಿದ್ದರು. ಅ. 4ರಂದು ಹೂತಿದ್ದ ಬಾಲಕಿಯ ಶವ ತೆಗೆದು ಮರು ಪರೀಕ್ಷೆ ನಡೆಸಲಾಗಿದೆ. ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT