ಶನಿವಾರ, ಜನವರಿ 29, 2022
23 °C

ಒಂದೇ ವಾರ್ಡ್‌ನ ಇಬ್ಬರಿಗೆ ಕೋವಿಡ್‌; ಸೀಲ್‌ಡೌನ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹುಲಸೂರ: ಪಟ್ಟಣದ 9ನೇ ವಾರ್ಡ್‌ನ ಇಬ್ಬರಿಗೆ ಸೋಮವಾರ ಕೋವಿಡ್ ದೃಢಪಟ್ಟಿದ್ದು, ಬಡಾವಣೆಯನ್ನು ಸೀಲ್‌ಡೌನ್‌ ಮಾಡಲಾಗಿದೆ.

16 ವರ್ಷದ ಯುವಕ ಹಾಗೂ 13 ವರ್ಷದ ಯುವತಿಗೆ ಕೋವಿಡ್ ದೃಢಪಟ್ಟಿದೆ. ಬೆಂಗಳೂರಿನಿಂದ ಈಚೆಗೆ ಮದುವೆಗೆ ಬಂದಿದ್ದ ಇನ್ನೂ ಮೂವರಿಗೆ ಕೋವಿಡ್‌ ದೃಢಪಟ್ಟಿತ್ತು, ಅವರು ಚಿಕಿತ್ಸೆಗೆ ಬೆಂಗಳೂರಿಗೆ ಮರಳಿದ್ದಾರೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ.ಅರಿಫೋದ್ದೀನ್ ದೃಢಪಡಿಸಿದ್ದಾರೆ.

ತಾಲ್ಲೂಕು ಆಡಳಿತ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಅಧಿಕಾರಿಗಳು ವಾರ್ಡ್‌ಗೆ ಆಗಮಿಸಿ ಸೀಲ್‌ಡೌನ್‌ ಡೌನ್ ಮಾಡಿಸಿ, ಓಣಿಯಲ್ಲಿನ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿಸಿದರು. ಹೊರಗಿನವರಿಗೆ ಓಣಿಯಲ್ಲಿ ಪ್ರವೇಶ ನಿರಾಕರಿಸುವ ಮೂಲಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ಶಿವಾನಂದ ಮೇತ್ರೆ ತಿಳಿಸಿದ್ದರು.

ಇದೇ ಸಂದರ್ಭದಲ್ಲಿ ಪಿಎಸ್ಐ ಗೌತಮ್ ಗುತ್ತೆದಾರ, ಆರ್.ಐ.ಮೌನೇಶ್ವರ ಸ್ವಾಮಿ, ತಲಾಟಿ ನಾಗರಾಜ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.