ಶನಿವಾರ, ಸೆಪ್ಟೆಂಬರ್ 25, 2021
24 °C

ಬೀದರ್: ನೂತನ ಡಿಡಿಪಿಯು ಆಂಜನೇಯಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಪದವಿಪೂರ್ವ ಶಿಕ್ಷಣ ಇಲಾಖೆಯ ನೂತನ ಉಪ ನಿರ್ದೇಶಕ ಎಂ.ಆಂಜನೇಯ ಹಾಗೂ ನಿರ್ಗಮಿತ ಉಪನಿರ್ದೇಶಕ ಚಂದ್ರಕಾಂತ ಶಹಾಬಾದಕರ್ ಅವರನ್ನು ಜಿಲ್ಲಾ ಉಪನ್ಯಾಸಕರ ಸಂಘದ ವತಿಯಿಂದ ನಗರದಲ್ಲಿ ಮಂಗಳವಾರ ಸನ್ಮಾನಿಸಲಾಯಿತು.

ಎಂ.ಆಂಜನೇಯ ಮಾತನಾಡಿ, ಕೋವಿಡ್ ನಡುವೆಯೂ ಎಲ್ಲರ ಸಹಕಾರದೊಂದಿಗೆ ಜಿಲ್ಲೆಯ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಕೊಡಲು ಹಾಗೂ ಜಿಲ್ಲೆಯ ಫಲಿತಾಂಶ ವೃದ್ಧಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.

ಉಪನ್ಯಾಸಕರು ಆನ್‍ಲೈನ್ ಅಥವಾ ಆಫ್‍ಲೈನ್ ತರಗತಿಗಳನ್ನು ವೇಳಾಪಟ್ಟಿಗೆ ಅನುಗುಣವಾಗಿ ನಡೆಸಬೇಕು. ಯಾರೂ ಕೆಲಸದಲ್ಲಿ ಅಸಡ್ಡೆ ತೋರಿಸಬಾರದು ಎಂದು ಹೇಳಿದರು.

ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಓಂಕಾರ ಸೂರ್ಯವಂಶಿ, ಪ್ರಾಚಾರ್ಯ ವೈಜಿನಾಥ ಕಾಳೆ, ಉಪನ್ಯಾಸಕ ಶ್ರೀನಿವಾಸ ಜಿವಣಗಿ, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ ಅಧೀಕ್ಷಕ ಸಂಗನಬಸವ, ಮೀನಾಕ್ಷಿ, ಶಕುಂತಲಾ, ರವಿ ಮೋರೆ, ಸಿದ್ರಾಮ ಜ್ಯಾಂತಿಕರ್, ಸಂಜೀವ ರೋಗನ್, ಸಂಗಮೇಶ ಸೋನಾರ್, ರಮೇಶ, ಅನಿಲ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು