ಸೋಮವಾರ, ಜನವರಿ 17, 2022
20 °C

ಬೀದರ್: ನೂತನ ಡಿಎಚ್‍ಒ ಡಾ. ಸ್ವಾಮಿಗೆ ಸನ್ಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ನೂತನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಡಾ. ರತಿಕಾಂತ ಸ್ವಾಮಿ ಅವರನ್ನು ಆರೋಗ್ಯ ಇಲಾಖೆ ನೌಕರರ ಸಂಘದಿಂದ ನಗರದಲ್ಲಿ ಸನ್ಮಾನಿಸಲಾಯಿತು.

ರತಿಕಾಂತ ಸ್ವಾಮಿ ಅವರು ವೈದ್ಯಾಧಿಕಾರಿ, ಜಿಲ್ಲಾ ಶಸ್ತ್ರಚಿಕಿತ್ಸಕರಾಗಿ ಉತ್ತಮ ಸೇವೆ ಸಲ್ಲಿಸಿದ್ದಾರೆ. ಅವರ ಸೇವಾ ನಿಷ್ಠೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಹುದ್ದೆ ಒಲಿದು ಬಂದಿದೆ. ಅವರ ಅವಧಿಯಲ್ಲಿ ಜಿಲ್ಲೆಯ ಆರೋಗ್ಯ ಇಲಾಖೆಯಲ್ಲಿ ಇನ್ನಷ್ಟು ಸುಧಾರಣೆ ತರುವ ವಿಶ್ವಾಸ ಇದೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜಕುಮಾರ ಮಾಳಗೆ ಹೇಳಿದರು.

ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಸದಾಶಿವ, ಡಾ. ಅನಿಲ್ ಚಿಂತಾಮಣಿ, ಸುನೀಲ್ ಕಸ್ತೂರೆ, ಪ್ರಕಾಶ ಮಹಿಮಾಕರ್, ವಿಲ್ಸನ್, ಶಿವಾನಂದ ಸ್ವಾಮಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು