ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಲ್ಲೆಯಲ್ಲಿ ರಾತ್ರಿ ಕರ್ಫ್ಯೂ ಜಾರಿ: ಜಿಲ್ಲಾಧಿಕಾರಿ

ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ
Last Updated 11 ಏಪ್ರಿಲ್ 2021, 3:45 IST
ಅಕ್ಷರ ಗಾತ್ರ

ಬೀದರ್‌: ಕೋವಿಡ್‌ ನಿಯಂತ್ರಣಕ್ಕೆ ಏಪ್ರಿಲ್ 10ರಿಂದ ರಾತ್ರಿ 10 ಗಂಟೆಯಿಂದ ಬೆಳಿಗ್ಗೆ 5 ಗಂಟೆಯವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಸಾರ್ವಜನಿಕರು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಮನವಿ ಮಾಡಿದ್ದಾರೆ.

ಕೋವಿಡ್-19 ಪ್ರಕರಣಗಳ ನಿಯಂತ್ರಣಕ್ಕೆ ಕುಟ್ಟುನಿಟ್ಟಿನ ನಿಯಮಗಳನ್ನು ಪಾಲನೆ ಮಾಡುವುದು ಅನಿವಾರ್ಯವಾಗಿದೆ.
ಕರ್ಪ್ಯೂ ಸಂದರ್ಭದಲ್ಲಿ ಅಗತ್ಯ ಸೇವೆಗಳಿಗೆ ಮಾತ್ರ ಅನುಮತಿ ಇದೆ. ಉಳಿದ ಎಲ್ಲ ಸೇವೆ ಹಾಗೂ ಸಂಚಾರಗಳನ್ನು ನಿಷೇಧಿಸಲಾಗಿದೆ. ವಿವಿಧ ಆರೋಗ್ಯ ಸಂಬಂಧಿತ ಸಮಸ್ಯೆಗಳಿಂದ ಬಳಲುತ್ತಿರುವ ವ್ಯಕ್ತಿಗಳಿಗೆ ಮತ್ತು ಅವರ ಸಹಾಯಕರಿಗೆ ವೈದ್ಯಕೀಯ ಸೇವೆಗೆ ನಿರ್ಬಂಧ ಇಲ್ಲ ಎಂದು ಹೇಳಿದ್ದಾರೆ.

ರಾತ್ರಿ ಪಾಳಿಯಲ್ಲಿ ಕಾರ್ಯ ನಿರ್ವಹಿಸುವ ಕಾರ್ಖಾನೆಗಳು, ಕಂಪನಿಗಳು, ಸಂಸ್ಥೆಗಳು ಯಥಾ ರೀತಿ ಕಾರ್ಯ ನಿರ್ವಹಿಸಲು ಅನುಮತಿಸಿದೆ. ವಾಣಿಜ್ಯ ಚಟುವಟಿಕೆಗಳನ್ನು ನಿರ್ಬಂಧಿಸಲಾಗಿದೆ. ಅಗತ್ಯ ಸೇವೆ ಒದಗಿಸುವ ವಾಹನಗಳು, ಸರಕು ಸಾಗಣೆ ವಾಹನಗಳು, ಹೋಮ್ ಡೆಲಿವರಿ, ಇ –ಕಾಮರ್ಸ್ ಮತ್ತು ಖಾಲಿ ವಾಹನಗಳ ಸಂಚಾರಕ್ಕೆ ಅವಕಾಶ ಇದೆ. ರಾತ್ರಿ ವೇಳೆಯಲ್ಲಿನ ಬಸ್, ರೈಲು ಹಾಗೂ ವಿಮಾನದ ದೂರ ಪ್ರಯಾಣಕ್ಕೆ ಅವಕಾಶ ಇದೆ.

ಪ್ರಯಾಣಿಕರು ಮನೆಯಿಂದ ನಿಲ್ದಾಣಗಳಿಗೆ ಮತ್ತು ನಿಲ್ದಾಣಗಳಿಂದ ಮನೆಗೆ ಅಧಿಕೃತ ಟಿಕೆಟ್‌ಗಳ ಆಧಾರದ ಮೇಲೆ ಅಟೊ, ಕ್ಯಾಬ್ ಇತ್ಯಾದಿಗಳ ಮೂಲಕ ಸಂಚರಿಸಲು ಅನುಮತಿ ಕೊಡಲಾಗಿದೆ ಎಂದು ತಿಳಿಸಿದ್ದಾರೆ.

ನಿಯಮ ಉಲ್ಲಂಘಿಸುವ ವ್ಯಕ್ತಿಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT