ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸನ್ಮಾನಕ್ಕೆ ಹಾರ ತುರಾಯಿ ಬೇಡ

Published 6 ಜೂನ್ 2023, 14:23 IST
Last Updated 6 ಜೂನ್ 2023, 14:23 IST
ಅಕ್ಷರ ಗಾತ್ರ

ಭಾಲ್ಕಿ: ನಾನು ಸಚಿವನಾಗಿನಿಂದಲೂ ನಿತ್ಯ ಬೀದರ್ ಜಿಲ್ಲೆಯ ಭಾಲ್ಕಿ ಕ್ಷೇತ್ರದಿಂದ ಬೆಂಗಳೂರಿನವರೆಗೆ ಸಾವಿರಾರು ಜನರು ಆಗಮಿಸಿ, ನನಗೆ ಹಾರ, ತುರಾಯಿ ಹಾಕಿ, ಶಾಲು ಹೊದಿಸಿ ಸನ್ಮಾನ ಮಾಡುತ್ತಿದ್ದು, ಜನರ ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಆದರೆ, ಇನ್ಮುಂದೆ ಯಾರೂ ಸನ್ಮಾನ ಮಾಡುವುದು ಹಾರ, ತುರಾಯಿ ತರುವುದು ಬೇಡ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.

ಸುಮಾರು 700 ಕಿ.ಮೀ. ದೂರದಿಂದ 4-5 ಸಾವಿರ ರೂಪಾಯಿ ವೆಚ್ಚ ಮಾಡಿಕೊಂಡು ಬೆಂಗಳೂರಿಗೆ ಸಾವಿರಾರು ಜನರು ಬರುತ್ತಿದ್ದಾರೆ. ನಾನು ಸಚಿವ ಸಂಪುಟ ಸಭೆ, ಅಧಿಕಾರಿಗಳ ಸಭೆ-ಸಮಾರಂಭಗಳಲ್ಲಿದ್ದಾಗ ಜನರಿಗೆ ಭೇಟಿ ಮಾಡಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಇದು ತಮಗೂ ನೋವು ತಂದಿದೆ. ಈ ಹಿನ್ನೆಲೆಯಲ್ಲಿ ಯಾರೂ ಸಹ ಬೀದರ್, ಭಾಲ್ಕಿಯಿಂದ ಬೆಂಗಳೂರಿಗೆ ಆಗಮಿಸಿ, ಸನ್ಮಾನ ಮಾಡುವುದು ಬೇಡ ಎಂದು ಮನವಿ ಮಾಡಿದ್ದಾರೆ.

ಜಿಲ್ಲೆಯ ಜನರು ತಮ್ಮ ಮೇಲೆ ಇಟ್ಟಿರುವ ಪ್ರೀತಿ ವಿಶ್ವಾಸಕ್ಕೆ ನಾನು ಆಭಾರಿಯಾಗಿದ್ದೇನೆ. ಎರಡ್ಮೂರು ದಿನದಲ್ಲಿ ನಾನು, ಬೀದರ್ ಜಿಲ್ಲೆಗೆ ಆಗಮಿಸಲಿದ್ದು, ಹಂತ ಹಂತವಾಗಿ ತಾಲ್ಲೂಕು, ಹೋಬಳಿ, ಪಂಚಾಯಿತಿ ಮತ್ತು ಗ್ರಾಮ ಮಟ್ಟದಲ್ಲಿ ಪ್ರವಾಸ ಮಾಡಿ ಜನರ ಅಹವಾಲು ಆಲಿಸಿ, ಅದಕ್ಕೆ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT