ಬೀದರ್: ‘ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ (ಕೆಕೆಆರ್ಡಿಬಿ) ಬೀದರ್ ಜಿಲ್ಲೆಯಲ್ಲಿ ಕೈಗೊಂಡಿರುವ ಎಲ್ಲ ಕಾಮಗಾರಿಗಳನ್ನು ಮಾರ್ಚ್ನೊಳಗೆ ಪೂರ್ಣಗೊಳಿಸಬೇಕು. ಯಾವುದೇ ಕಾಮಗಾರಿ ನನೆಗುದಿಗೆ ಬೀಳಬಾರದು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾ ಪಂಚಾಯಿತಿಯಲ್ಲಿ ಶನಿವಾರ ಸಂಜೆ ನಡೆಸಿದ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
.ಗುತ್ತಿಗೆದಾರನ ಆತ್ಮಹತ್ಯೆ ಪ್ರಕರಣ: ಖಂಡ್ರೆ ಮೌನ ನಾಚಿಕೆಗೇಡಿತನ; ಭಗವಂತ ಖೂಬಾ .
ಯಾವುದೇ ಕಾಮಗಾರಿ ಕುಂಠಿತಗೊಳ್ಳಬಾರದು. ಯುದ್ಧೋಪಾದಿಯಲ್ಲಿ ಕೆಲಸಗಳು ನಡೆಯಬೇಕು. ಮೈಕ್ರೋ ಹಾಗೂ ಮ್ಯಾಕ್ರೋ ಯೋಜನೆಯ ಎಲ್ಲ ಕಾಮಗಾರಿಗಳು ಚುರುಕಿನಿಂದ ಮಾಡಿ, ಮುಗಿಸಬೇಕು ಎಂದು ನಿರ್ದೇಶನ ನೀಡಿದರು.

ಇದುವರೆಗೆ ಒಟ್ಟು 3,564 ಕಾಮಗಾರಿಗಳು ಪೂರ್ಣಗೊಂಡಿವೆ. 708 ಕಾಮಗಾರಿಗಳು ಪ್ರಗತಿಯಲ್ಲಿವೆ. 436 ಇನ್ನೂ ಆರಂಭಿಸಬೇಕಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ‘ಎಲ್ಲ ಕಾಮಗಾರಿಗಳ ಗುಣಮಟ್ಟವನ್ನು ಮೂರನೇ ಪಕ್ಷದ ಮೂಲಕ ಪರೀಕ್ಷೆ ಮಾಡಿಸಬೇಕು’ ಎಂದು ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ ಅವರಿಗೆ ಸಚಿವರು ಸೂಚಿಸಿದರು.
.ಕಸ್ತೂರಿ ರಂಗನ್ ವರದಿ ಸಂಪೂರ್ಣವಾಗಿ ತಿರಸ್ಕಾರ: ಸಚಿವ ಈಶ್ವರ ಖಂಡ್ರೆ.
ನಿರ್ಮಿತಿ ಕೇಂದ್ರದಿಂದ 118 ಅಂಗನವಾಡಿ ಕಾಮಗಾರಿಗಳು ಪೂರ್ಣಗೊಂಡಿದ್ದು ಉಳಿದವುಗಳು ಪ್ರಗತಿಯಲ್ಲಿವೆ. ಶಿಕ್ಷಣ ಇಲಾಖೆಗೆ ಮೈಕ್ರೋ ಯೋಜನೆಯಡಿ 2023ರಲ್ಲಿ 37 ಕಾಮಗಾರಿಗಳಿಗೆ ₹4.65 ಕೋಟಿ ನೀಡಲಾಗಿದೆ ಎಂದರು.

ಬಸವಕಲ್ಯಾಣದಲ್ಲಿ ಗೋಶಾಲೆ ನಿರ್ಮಾಣಕ್ಕೆ ಸರ್ಕಾರವು ₹50 ಲಕ್ಷ ಅನುದಾನ ನೀಡಿದೆ. ಗೋಶಾಲೆ ಆರಂಭಿಸಲು ಪಶು ಸಂಗೋಪನಾ ಇಲಾಖೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಪಶು ಸಂಗೋಪನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಗಿರೀಶ ಬದೋಲೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರದೀಪ್ ಗುಂಟಿ, ಉಪ ಅರಣ್ಯ ಸಂರಕ್ಷಣಾಧಿಕಾರಿ ವಾನತಿ ಎಂ.ಎಂ., ಹೆಚ್ಚುವರಿ ಜಿಲ್ಲಾಧಿಕಾರಿ ಶಿವಕುಮಾರ ಶೀಲವಂತ, ಉಪವಿಭಾಗಾಧಿಕಾರಿ ಎಂ.ಡಿ.ಶಕೀಲ್, ಬಸವಕಲ್ಯಾಣ ಉಪವಿಭಾಗಾಧಿಕಾರಿ ಮುಕುಲ್ ಜೈನ್ ಹಾಜರಿದ್ದರು.
.ಕಾವೇರಿ ನದಿಪಾತ್ರ 6 ತಿಂಗಳ ಒಳಗೆ ತ್ಯಾಜ್ಯ ಮುಕ್ತ: ಸಚಿವ ಈಶ್ವರ ಖಂಡ್ರೆ.
‘ಫ್ಲೋರೈಡ್ ಹೆಚ್ಚಿರುವ ಗ್ರಾಮಗಳ ಪಟ್ಟಿ ಮಾಡಿ’

ಜಿಲ್ಲೆಯಲ್ಲಿ ಪ್ಲೋರೈಡ್ ಹಾಗೂ ನೈಟ್ರೇಟ್ ರಸಾಯನಿಕ ಅಂಶ ಹೆಚ್ಚಿರುವ ಗ್ರಾಮಗಳ ಪಟ್ಟಿ ಮಾಡಿ ವರದಿ ಪಡೆಯಬೇಕು. ಅಗತ್ಯವಿದ್ದಲ್ಲಿ ಆರ್.ಓ.ಪ್ಲಾಂಟ್ ಅಳವಡಿಸಬೇಕು. ಆರೋಗ್ಯ ಇಲಾಖೆಯಿಂದ ವರದಿ ತರಿಸಿಕೊಳ್ಳಬೇಕೆಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಗಿರೀಶ ಬದೋಲೆ ಅವರಿಗೆ ಸಚಿವ ಈಶ್ವರ ಬಿ. ಖಂಡ್ರೆ ಸೂಚನೆ ನೀಡಿದರು.

ಆರೋಗ್ಯ ಇಲಾಖೆಗೆ 11 ಆಂಬ್ಯುಲೆನ್ಸ್ಗಳನ್ನು ಒದಗಿಸಲಾಗಿದೆ. 11 ಚಾಲಕರನ್ನು ಕೆಕೆಆರ್ಡಿಬಿ ಅಡಿ ಒದಗಿಸಲಾಗುವುದು ಎಂದು ತಿಳಿಸಿದರು.
.ಆನೆ ಹಾವಳಿ ತಡೆ | ತಮಿಳುನಾಡು ಮಾದರಿ ಅಧ್ಯಯನ: ಸಚಿವ ಈಶ್ವರ ಖಂಡ್ರೆ.
‘ಎಸ್ಎಸ್ಎಲ್ಸಿ ಫಲಿತಾಂಶ ಸುಧಾರಿಸಿ’

‘ಮಾರ್ಚ್ 21ರಿಂದ ರಾಜ್ಯದಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆಗಳು ಆರಂಭಗೊಳ್ಳಲಿವೆ. ಜಿಲ್ಲೆಯ ಫಲಿತಾಂಶ ಸುಧಾರಿಸಿ, ಹೆಚ್ಚಿಸಬೇಕು. ಜಿಲ್ಲೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ರ್ಯಾಂಕ್ ಬರಬೇಕು. ಇದಕ್ಕಾಗಿ ವಿಶೇಷ ಕಾಳಜಿ ವಹಿಸಿ, ವಿಶೇಷ ಕಾರ್ಯಾಗಾರ ಏರ್ಪಡಿಸಬೇಕು’ ಎಂದು ಡಿಡಿಪಿಐ ಸಚಿವ ಈಶ್ವರ ಬಿ. ಖಂಡ್ರೆ ಸೂಚಿಸಿದರು.

ಎಲ್ಲ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರು ತಮ್ಮ ವ್ಯಾಪ್ತಿಯ ಪ್ರೌಢ ಶಾಲೆಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಬೇಕು ಎಂದು ತಿಳಿಸಿದರು.
.ಅಂಗವಿಕಲರಿಗೆ ಕೆಕೆಆರ್ಡಿಬಿ ಅನುದಾನ ಮೀಸಲು: ಸಚಿವ ಈಶ್ವರ ಖಂಡ್ರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.