ಬೀದರ್: ‘ಜಿಲ್ಲೆಯ ರೈತರ ಬೇಡಿಕೆಗೆ ತಕ್ಕಂತೆ ಸೋಯಾಬಿನ್ ಬಿತ್ತನೆ ಬೀಜ ಪೂರೈಸಲಾಗುವುದು. ರೈತರು ಆತಂಕ ಪಡುವ ಅಗತ್ಯವಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಆಶ್ವಾಸನೆ ನೀಡಿದ್ದಾರೆ.

‘ಈ ಬಾರಿ ವಾಡಿಕೆಗಿಂತಲೂ ಉತ್ತಮ ಮಳೆಯಾಗಿರುವ ಕಾರಣ ಸೋಯಾಬಿನ್ ಬಿತ್ತನೆ ಬೀಜಕ್ಕೆ ಬೇಡಿಕೆ ಹೆಚ್ಚಾಗಿದೆ. ಪ್ರಸಕ್ತ ಸಾಲಿನಲ್ಲಿ 1,02,500 ಕ್ವಿಂಟಲ್ ಸೋಯಾಬಿನ್ ಬಿತ್ತನೆ ಬೀಜ ಮಂಜೂರಾಗಿದೆ. ಈಗಾಗಲೇ 87,500 ಕ್ವಿಂಟಲ್ ವಿತರಿಸಲಾಗಿದೆ. 15,000 ಕ್ವಿಂಟಲ್ ಸೋಯಾಬಿನ್ ಬಿತ್ತನೆ ಬೀಜ ಜಿಲ್ಲೆಗೆ ರವಾನೆಯಾಗಿದೆ. ಎರಡ್ಮೂರು ದಿನಗಳಲ್ಲಿ ರೈತರಿಗೆ ಲಭ್ಯವಾಗಲಿದೆ’ ಎಂದು ಶನಿವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ಕಳೆದ ವರ್ಷ ಜಿಲ್ಲೆಯಲ್ಲಿ 1,12,000 ಕ್ವಿಂಟಲ್ ಸೋಯಾಬಿನ್ ಬಿತ್ತನೆ ಬೀಜ ವಿತರಿಸಲಾಗಿತ್ತು. ಈ ಬಾರಿ ಉತ್ತಮ ಪೂರ್ವ ಮುಂಗಾರು ಮಳೆಯಿಂದ ಬೇಡಿಕೆ ಹೆಚ್ಚಾಗಿದೆ. ಯಾದಗಿರಿಯಲ್ಲಿ ಶನಿವಾರ ನಡೆದ ಆರೋಗ್ಯ ಆವಿಷ್ಕಾರ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗೆ ಈ ಸಂಬಂಧ ಮನವಿ ಸಲ್ಲಿಸಲಾಗಿದೆ. 15,000 ಕ್ವಿಂಟಲ್ ಸೋಯಾಬಿನ್ ಬಿತ್ತನೆ ಬೀಜ ಮಾರುಕಟ್ಟೆಯಲ್ಲಿ ಖರೀದಿಸಿ ಹಚ್ಚುವರಿಯಾಗಿ ವಿತರಿಸಲು ಸಮ್ಮತಿಸಿದ್ದಾರೆ’ ಎಂದು ತಿಳಿಸಿದ್ದಾರೆ.

‘ಶೀಘ್ರವೇ ಹೆಚ್ಚುವರಿ ಬಿತ್ತನೆ ಬೀಜ ಜಿಲ್ಲೆಗೆ ಬರಲಿದೆ. ರೈತರ ಬೇಡಿಕೆಗೆ ಅನುಗುಣವಾಗಿ ಬಿತ್ತನೆ ಬೀಜ ವಿತರಿಸಲಾಗುವುದು. ಯಾರೂ ಆತಂಕ ಪಡುವುದು ಬೇಡ’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.