ಶನಿವಾರ, 23 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೀದರ್‌: ವಸತಿ ಶಾಲೆಯ ಮೇಲ್ವಿಚಾರಕಿಗೆ ಕಿರುಕುಳ, ಶಿಕ್ಷಕ ಅಮಾನತು

Published 31 ಜುಲೈ 2023, 11:48 IST
Last Updated 31 ಜುಲೈ 2023, 11:48 IST
ಅಕ್ಷರ ಗಾತ್ರ

ಬೀದರ್‌: ಕರ್ತವ್ಯಲೋಪ, ದುರ್ನಡತೆ ಹಿನ್ನೆಲೆಯಲ್ಲಿ ಬಸವಕಲ್ಯಾಣ ತಾಲ್ಲೂಕಿನ ಕಾಂಬಳೆವಾಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕ ಅಶೋಕ ರೆಡ್ಡಿ ಹುಡೆ ಅವರನ್ನು ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಸಲೀಂ ಪಾಷಾ ಅವರು ಸೋಮವಾರ ಅಮಾನತುಗೊಳಿಸಿದ್ದಾರೆ.

‘ಅಶೋಕ ರೆಡ್ಡಿ ಅವರು ಬಸವಕಲ್ಯಾಣ ತಾಲ್ಲೂಕಿನ ಕಿಟ್ಟಾ ಗ್ರಾಮದ ಕರ್ನಾಟಕ ಕಸ್ತೂರಬಾ ಗಾಂಧಿ ಬಾಲಿಕಾ ವಸತಿ ಶಾಲೆಯ ನೋಡಲ್‌ ಅಧಿಕಾರಿ ಕೂಡ ಆಗಿದ್ದಾರೆ. ವಸತಿ ಶಾಲೆಯ ಮೇಲ್ವಿಚಾರಕಿ ಸುನೀತಾ ರಾಜಕುಮಾರ ನಾರಾಯಣಪೇಟಕರ ಅವರಿಗೆ ಲೈಂಗಿಕ ಕಿರುಕುಳ ಕೊಟ್ಟಿದ್ದಾರೆ ಎಂಬ ದೂರು ಆಧರಿಸಿ ಜು. 27ರಂದು ಠಾಣೆಯಲ್ಲಿ ದೂರು ದಾಖಲಾಗಿತ್ತು. ಬಳಿಕ ಅಧಿಕಾರಿಗಳನ್ನು ಶಾಲೆಗೆ ಕಳುಹಿಸಿ ವರದಿ ಪಡೆಯಲಾಗಿದೆ. ಅಶೋಕ ರೆಡ್ಡಿ ಅವರು ಕರ್ತವ್ಯಲೋಪ, ದುರ್ನಡತೆಯಿಂದ ವರ್ತಿಸಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಅವರ ವಿರುದ್ಧ ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮಾವಳಿ 2021ರ ಪ್ರಕಾರ ಶಿಸ್ತು ಕ್ರಮ ಜರುಗಿಸಲಾಗಿದೆ ಎಂದು ಸಲೀಂ ಪಾಷಾ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT