ಶುಕ್ರವಾರ, ಜೂನ್ 25, 2021
30 °C

ಬೀದರ್ ಜಿಲ್ಲೆಯಲ್ಲಿ ಸಾಧಾರಣ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ನಗರವೂ ಸೇರಿದಂತೆ ಜಿಲ್ಲೆಯಾದ್ಯಂತ ಸೋಮವಾರ ಸಾಧಾರಣ ಮಳೆಯಾಗಿದೆ.

ಬೀದರ್, ಭಾಲ್ಕಿ, ಹುಮನಾಬಾದ್, ಬಸವಕಲ್ಯಾಣ ಹಾಗೂ ಭಾಲ್ಕಿ ತಾಲ್ಲೂಕಿನ ವಿವಿಧೆಡೆ ಮಳೆ ಸುರಿದಿದೆ.

ನಗರದಲ್ಲಿ ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣ ಇತ್ತು. ಮಧ್ಯಾಹ್ನ ಜಿಟಿ ಜಿಟಿಯಾಗಿ ಮಳೆ ಆರಂಭವಾಯಿತು. ಸಂಜೆ ವೇಳೆ ಸಾಧಾರಣ ಮಳೆ ಸುರಿಯಿತು.

ಮಳೆಯ ಕಾರಣ ಜನಜೀವನ ಅಸ್ತವ್ಯಸ್ತಗೊಂಡಿತು. ನಗರದ ರಸ್ತೆಗಳಲ್ಲಿ ಜನ ಸಂಚಾರ ವಿರಳವಾಗಿತ್ತು. ಅನಿವಾರ್ಯ ಇದ್ದವರು ಕೊಡೆ ಆಸರೆ ಪಡೆದು, ಜರ್ಕಿನ್ ಧರಿಸಿ ಓಡಾಡುತ್ತಿದ್ದದ್ದು ಕಂಡು ಬಂದಿತು. ಅಂಗಡಿಗಳು ತೆರೆದಿದ್ದರೂ ಗ್ರಾಹಕರ ಸಂಖ್ಯೆ ಕಡಿಮೆಯಾಗಿತ್ತು.

ನಗರದ ಅನೇಕ ತಗ್ಗು ಪ್ರದೇಶಗಳಲ್ಲಿ ಮಳೆ ನೀರು ನಿಂತುಕೊಂಡಿತ್ತು. ಗುಂಪಾ ರಿಂಗ್ ರಸ್ತೆ, ಮೈಲೂರು ಕ್ರಾಸ್, ಹಾರೂರಗೇರಿ ಕಮಾನ್, ಬೊಮ್ಮಗೊಂಡೇಶ್ವರ ವೃತ್ತದಿಂದ ಅಶೋಕ ಹೋಟೆಲ್‍ಗೆ ಸಂಪರ್ಕ ಕಲ್ಪಿಸುವ ರೈಲ್ವೆ ಕೆಳ ಸೇತುವೆ, ನಯಾಕಮಾನ್, ಸರ್ಕಾರಿ ಪದವಿಪೂರ್ವ ಕಾಲೇಜು ಮುಂಭಾಗದ ರಸ್ತೆ, ಶಿವನಗರ, ಹೌಸಿಂಗ್ ಬೋರ್ಡ್ ಕಾಲೊನಿ, ನೆಹರೂ ಸ್ಟೇಡಿಯಂ ಹತ್ತಿರ, ಚಿದ್ರಿ ಸೇರಿ ವಿವಿಧೆಡೆ ರಸ್ತೆಯಲ್ಲಿ ನೀರು ಸಂಗ್ರಹಗೊಂಡಿತು.

ರೈಲ್ವೆ ಕೆಳ ಸೇತುವೆ ರಸ್ತೆಯಲ್ಲಿನ ತಗ್ಗು ಕಾಣಿಸದೆ ಬೈಕ್ ಸವಾರರು ತೊಂದರೆ ಅನುಭವಿಸಿದರು. ಮಳೆ ರಾತ್ರಿವರೆಗೂ ಮುಂದುವರಿದಿತ್ತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು