ಮಂಗಳವಾರ, ಅಕ್ಟೋಬರ್ 20, 2020
22 °C

ಬೀದರ್: ಜಿಲ್ಲೆಯಲ್ಲಿ ಸಾಧಾರಣ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೀದರ್: ಜಿಲ್ಲೆಯಲ್ಲಿ ಭಾನುವಾರ ಸಾಧಾರಣದಿಂದ ಭಾರಿ ಮಳೆಯಾಗಿದೆ. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಇತ್ತು. ಗಡಿಭಾಗದಲ್ಲಿ ಬೆಳಗಿನ ಜಾವ ಮಳೆ ಸುರಿದರೆ, ನಗರ ಪ್ರದೇಶದಲ್ಲಿ ಮಧ್ಯಾಹ್ನ ಮಳೆ ಅಬ್ಬರಿಸಿತು.

ನಗರದಲ್ಲಿ ಮಧ್ಯಾಹ್ನ ಒಂದೂವರೆ ತಾಸು ಧಾರಾಕಾರ ಮಳೆ ಸುರಿದಿದೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿತ್ತು. ಕಮಲನಗರದಲ್ಲಿ 17 ಮಿ.ಮೀ ಮಳೆ ದಾಖಲಾಗಿದೆ. ಹೊಲಗಳಿಗೆ ಅಪಾರ ನೀರು ನುಗ್ಗಿ ಬೆಳೆ ನೀರು ಪಾಲಾಗಿದೆ.

ಔರಾದ್, ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ್‌ ಹಾಗೂ ಚಿಟಗುಪ್ಪದಲ್ಲಿ ಸಾಧಾರಣ ಮಳೆಯಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು