ಶನಿವಾರ, ಜನವರಿ 29, 2022
22 °C
ತೋರಣಾ: ರೋಜಗಾರ್ ದಿವಸ್ ಆಚರಣೆ

‘ನರೇಗಾ ಸದುಪಯೋಗ ಪಡೆಯಿರಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕಮಲನಗರ: ತಾಲ್ಲೂಕಿನ ತೋರಣಾ ಗ್ರಾಮದ ಉದ್ಯೋಗ ಖಾತ್ರಿ ಕಾಮಗಾರಿ ಸ್ಥಳದಲ್ಲಿ ರೋಜಗಾರ್ ದಿವಸ್ ಆಚರಿಸಲಾಯಿತು.

ನರೇಗಾ ಯೋಜನೆ ತಾಲ್ಲೂಕು ಪಂಚಾಯಿತಿ ಐ.ಇ.ಸಿ ಸಂಯೋಜಕಿ ಸವಿತಾ ನಾಗೇಶ ಬನ್ನಾಳೆ ಮಾತನಾಡಿ,‘ಗ್ರಾಮೀಣ ಪ್ರದೇಶಗಳಿಗೆ ಮೂಲಸೌಕರ್ಯ ಕಲ್ಪಿಸಲು ಹಾಗೂ ಗುಳೆ ತಪ್ಪಿಸಲು ನರೇಗಾ ಯೋಜನೆ ರೂಪಿಸಲಾಗಿದೆ. ನರೇಗಾ ಅಡಿ ಗ್ರಾಮೀಣ ಪ್ರದೇಶಗಳಲ್ಲಿ ಹಲವು ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆ ಯಶಸ್ಸಿಗೆ ಕಾರ್ಮಿಕರ ಶ್ರಮವೇ ಮೂಲಾಧಾರವಾಗಿದೆ’ ಎಂದರು.

ಈ ವೇಳೆ ನರೇಗಾ ಯೋಜನೆಯಡಿ ಸರ್ಕಾರಿ ಜಮೀನಿನಲ್ಲಿ ಕೆರೆ ನಿರ್ಮಿಸಬೇಕು ಎಂದು ಗ್ರಾಮಸ್ಥರು ಮನವಿ ಮಾಡಿದರು.

ಗ್ರಾಮ ಪಂಚಾಯಿತಿ ಡಿಇಒ ರಾಜಕುಮಾರ.ವಿ.ಜಾಧವ, ಮೇಟಿ ತಾನಾಜಿ ಡೊಂಗ್ರೆ, ಪಂಚಾಯಿತಿ ಸದಸ್ಯರು ಹಾಗೂ ಕಾರ್ಮಿಕರು ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.