ಮಂಗಳವಾರ, ಅಕ್ಟೋಬರ್ 4, 2022
25 °C

ಸಂಕ್ಷಿಪ್ತ ಸುದ್ದಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಎನ್‍ಎಸ್‍ಎಸ್‍ಕೆ ವಾರ್ಷಿಕ ಮಹಾಸಭೆ 23ಕ್ಕೆ
ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಸಮೀಪದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ 2021-22ನೇ ಸಾಲಿನ ವಾರ್ಷಿಕ ಮಹಾಸಭೆ ಸೆ. 23 ರಂದು ಮಧ್ಯಾಹ್ನ 1ಕ್ಕೆ ಕಾರ್ಖಾನೆಯಲ್ಲಿ ನಡೆಯಲಿದೆ.
ಕಾರ್ಖಾನೆ ಅಧ್ಯಕ್ಷ ಡಿ.ಕೆ. ಸಿದ್ರಾಮ ಅಧ್ಯಕ್ಷತೆ ವಹಿಸುವರು. ಸದಸ್ಯರು ತಪ್ಪದೆ ಭಾಗವಹಿಸಬೇಕು ಎಂದು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಮನವಿ ಮಾಡಿದ್ದಾರೆ.

* * *

ಶಿಕ್ಷಕರ ದಿನಾಚರಣೆ, ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಇಂದು
ಬೀದರ್: ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿ ವತಿಯಿಂದ ನಗರದ ಐಎಂಎ ಹಾಲ್‍ನಲ್ಲಿ ಶನಿವಾರ (ಸೆ.17) ಮಧ್ಯಾಹ್ನ 3.30ಕ್ಕೆ ಶಿಕ್ಷಕರ ದಿನಾಚರಣೆ ಹಾಗೂ ಜಿಲ್ಲೆಯ 30 ಚಿತ್ರಕಲಾ ಶಿಕ್ಷಕರಿಗೆ ರಾಷ್ಟ್ರ ನಿರ್ಮಾಪಕ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲಾಗಿದೆ.
ಕಲಬುರಗಿಯ ಚೈತನ್ಯ ಆರ್ಟ್ ಗ್ಯಾಲರಿಯ ನಿರ್ದೇಶಕ ಡಾ. ಎ.ಎಸ್. ಪಾಟೀಲ ಉದ್ಘಾಟಿಸುವರು. ಕ್ಲಬ್ ಅಧ್ಯಕ್ಷ ನಿತಿನ್ ಕರ್ಪೂರ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ರೋಟರಿ ಕಲ್ಯಾಣ ಝೋನ್ ಸಹಾಯಕ ಗವರ್ನರ್ ಸಂಜಯ್ ಹತ್ತಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಗಣಪತಿ ಬಾರಾಟಕೆ, ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರ ಹಂಚನಾಳ, ಬಿಆರ್‍ಸಿ ಸಮನ್ವಯಾಧಿಕಾರಿ ವಿಜಯಕುಮಾರ ಬೆಳಮಗಿ, ಚಿತ್ರಕಲಾ ಶಿಕ್ಷಕರ ಒಕ್ಕೂಟದ ಜಿಲ್ಲಾ ಅಧ್ಯಕ್ಷ ವಿಷ್ಣು ಸಿಂಗ್ ಠಾಕೂರ್, ಸಪ್ನಾ ಗ್ರುಪ್ ವ್ಯವಸ್ಥಾಪಕ ನಿರ್ದೇಶಕ ಚಂದ್ರಶೇಖರ ಪಾಟೀಲ, ಕ್ಲಬ್ ಸಾಕ್ಷರತಾ ಅಭಿಯಾನದ ಅಧ್ಯಕ್ಷ ಪ್ರಭು ತಟ್ಟಪಟ್ಟಿ ಪಾಲ್ಗೊಳ್ಳಲಿದ್ದಾರೆ ಎಂದು ರೋಟರಿ ಕ್ಲಬ್ ಆಫ್ ಬೀದರ್ ನ್ಯೂ ಸೆಂಚುರಿಯ ಕಾರ್ಯದರ್ಶಿ ಡಾ. ರಿತೇಶ ಸುಲೆಗಾಂವ್ ತಿಳಿಸಿದ್ದಾರೆ.

* * *

ವಿದ್ಯುತ್ ಅದಾಲತ್ ಇಂದು
ಬೀದರ್: ಜಿಲ್ಲೆಯ ರಾಜೋಳ, ಮುಚಳಂಬ, ಚಂದನಹಳ್ಳಿ, ಹುಡಗಿ, ಅಲಿಪುರ ಹಾಗೂ ಶಾಮತಾಬಾದ್ ಗ್ರಾಮಗಳಲ್ಲಿ ಸೆ. 17 ರಂದು ಬೆಳಿಗ್ಗೆ 11ಕ್ಕೆ ವಿದ್ಯುತ್ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಜೆಸ್ಕಾಂ ಹೇಳಿಕೆ ತಿಳಿಸಿದೆ.

* * *
ಗಾಂಧಿಗಂಜ್ ಬ್ಯಾಂಕ್: 18ಕ್ಕೆ ಸಾಮಾನ್ಯ ಸಭೆ
ಬೀದರ್: ನಗರದ ಗಾಂಧಿ ಗಂಜ್ ಸಹಕಾರ ಬ್ಯಾಂಕ್‍ನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ ಸೆ. 18 ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ.
ಬ್ಯಾಂಕ್ ಅಧ್ಯಕ್ಷ ವಿಜಯಕುಮಾರ ಪಾಟೀಲ ಗಾದಗಿ ಅಧ್ಯಕ್ಷತೆ ವಹಿಸುವರು. ಸದಸ್ಯರು ತಪ್ಪದೆ ಭಾಗವಹಿಸಬೇಕು ಎಂದು ಬ್ಯಾಂಕ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೋರಿದ್ದಾರೆ.

* * *

ಕೈಲಾಸನಾಥ ಸಹಕಾರಿ ಮಹಾಸಭೆ ನಾಳೆ
ಬೀದರ್: ಶ್ರೀ ಕೈಲಾಸನಾಥ ಪತ್ತಿನ ಸೌಹಾರ್ದ ಸಹಕಾರಿ ನಿಯಮಿತದ 2021-22ನೇ ಸಾಲಿನ 16ನೇ ವಾರ್ಷಿಕ ಮಹಾಸಭೆ ನಗರದ ಮನ್ನಳ್ಳಿ ರಸ್ತೆಯಲ್ಲಿ ಇರುವ ಕೈಲಾಸ ಲೇಔಟ್‍ನ ಕೈಲಾಸನಾಥ ಮಂದಿರದಲ್ಲಿ ಸೆ. 18 ರಂದು ಬೆಳಿಗ್ಗೆ 11ಕ್ಕೆ ನಡೆಯಲಿದೆ.
ಸಹಕಾರಿಯ ಅಧ್ಯಕ್ಷ ಅಶೋಕ ಗಿರಿಮಲ್ ಅಧ್ಯಕ್ಷತೆ ವಹಿಸುವರು. ಸಹಕಾರಿಯ ಸದಸ್ಯರು ತಪ್ಪದೆ ಭಾಗವಹಿಸಬೇಕು ಎಂದು ಸಹಕಾರಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮನವಿ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.