ಮಂಗಳವಾರ, ಅಕ್ಟೋಬರ್ 20, 2020
21 °C
ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ನೇತೃತ್ವ

ಎನ್‍ಎಸ್‍ಎಸ್‍ಕೆ: ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಸಮೀಪದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ಚುನಾವಣೆಯಲ್ಲಿ ಹಾಲಿ ಅಧ್ಯಕ್ಷ ಉಮಾಕಾಂತ ನಾಗಮಾರಪಳ್ಳಿ ಅವರ ನೇತೃತ್ವದಲ್ಲಿ ಎಲ್ಲ 13 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ.

ಉಮಾಕಾಂತ ನಾಗಮಾರಪಳ್ಳಿ, ಚಂದ್ರಕಾಂತ ಹಿಪ್ಪಳಗಾಂವ್, ಬಾಲಾಜಿ ಬೆನಕನಳ್ಳಿ, ಶಿವಬಸಪ್ಪ ತ್ರಿಪುರಾಂತ, ಶಂಕರೆಪ್ಪ ಅತಿವಾಳ, ಸಿದ್ರಾಮ ಬರೂರ(ಕೆ), ಸಿದ್ರಾಮ ಜಲಸಂಘ್ವಿ, ರಾಜಕುಮಾರ ಗಾದಗಿ, ಸೀತಾರಾಮ ಚಿಂತಾಕಿ, ವಿಜಯಕುಮಾರ ಸಿತಾಳಗೇರಾ, ಮಲ್ಲಮ್ಮ ಚಾಂಬೋಳ, ಶೋಭಾವತಿ ಬಲ್ಲೂರ(ಜೆ) ಹಾಗೂ ಝರೆಪ್ಪ ಮಲ್ಲಪ್ಪ ಮಮದಾಪೂರ ನೂತನ ನಿರ್ದೇಶಕರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಚುನಾವಣಾಧಿಕಾರಿಯಾಗಿದ್ದ ಬೀದರ್ ಉಪ ವಿಭಾಗಾಧಿಕಾರಿ ಗರಿಮಾ ಪನ್ವಾರ್ ಅವರು ನೂತನ ನಿರ್ದೇಶಕರಿಗೆ ಪ್ರಮಾಣ ಪತ್ರ ವಿತರಿಸಿದರು.

ಎಲ್ಲ ಜನಪ್ರತಿನಿಧಿಗಳು, ಸದಸ್ಯ ರೈತರು ಹಾಗೂ ರೈತರ ಸಹಕಾರದಿಂದ ಕಾರ್ಖಾನೆಯ ಎಲ್ಲ ಸ್ಥಾನಗಳಿಗೆ ಅವಿರೋಧ ಆಯ್ಕೆ ಸಾಧ್ಯವಾಗಿದೆ ಎಂದು ಉಮಾಕಾಂತ ನಾಗಮಾರಪಳ್ಳಿ ಪ್ರತಿಕ್ರಿಯಿಸಿದರು.

ಉಮಾಕಾಂತ ನಾಗಮಾರಪಳ್ಳಿ ಅವರು ಕಾರ್ಖಾನೆಯ ಅಧ್ಯಕ್ಷರಾಗಿ ಪುನರಾಯ್ಕೆಯಾಗುವುದು ನಿಶ್ಚಿತವಾಗಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು