ಶುಕ್ರವಾರ, ಅಕ್ಟೋಬರ್ 30, 2020
25 °C

ಎನ್‍ಎಸ್‍ಎಸ್‍ಕೆ ಚುನಾವಣೆ 20 ರಂದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜನವಾಡ: ಬೀದರ್  ತಾಲ್ಲೂಕಿನ ಜನವಾಡ ಸಮೀಪ ಇರುವ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿ ಚುನಾವಣೆ ಅಕ್ಟೋಬರ್ 20 ರಂದು ನಡೆಯಲಿದೆ.

ಕಾರ್ಖಾನೆಯ ಸೂಚನಾ ಫಲಕದಲ್ಲಿ ಈಗಾಗಲೇ ಚುನಾವಣೆ ವೇಳಾಪಟ್ಟಿ ಪ್ರಕಟಿಸಲಾಗಿದೆ. ಪ್ರತಿಯನ್ನು ಅಂತಿಮ ಅರ್ಹ ಮತದಾರರಿಗೂ ಅಂಚೆ ಮೂಲಕ ಕಳುಹಿಸಲಾಗಿದೆ ಎಂದು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ಬಿ.ಎಸ್‌.ಅಪರಂಜಿ ತಿಳಿಸಿದ್ದಾರೆ.

ಚುನಾವಣೆಯಲ್ಲಿ ಮತ ಚಲಾಯಿಸಲು ಕಾರ್ಖಾನೆ ನೀಡುವ ಗುರುತಿನ ಚೀಟಿ ಕಡ್ಡಾಯವಾಗಿದೆ. ಅಂತಿಮ ಅರ್ಹ ಮತದಾರರು ಕಾರ್ಖಾನೆ ಕಚೇರಿ ವೇಳೆಯಲ್ಲಿ ತಮ್ಮ ಇತ್ತೀಚಿನ ಮೂರು ಭಾವಚಿತ್ರಗಳನ್ನು ಸಲ್ಲಿಸಿ ಗುರುತಿನ ಚೀಟಿ ಪಡೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.