ಭಾನುವಾರ, ಅಕ್ಟೋಬರ್ 25, 2020
21 °C

ಅ.20ಕ್ಕೆ ಎನ್‍ಎಸ್‍ಎಸ್‍ಕೆ ಚುನಾವಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಜನವಾಡ: ಬೀದರ್ ತಾಲ್ಲೂಕಿನ ಜನವಾಡ ಸಮೀಪದ ನಾರಂಜಾ ಸಹಕಾರ ಸಕ್ಕರೆ ಕಾರ್ಖಾನೆ ಆಡಳಿತ ಮಂಡಳಿ ಚುನಾವಣೆ ಅಕ್ಟೋಬರ್ 20 ರಂದು ನಡೆಯಲಿದೆ.

ಏಪ್ರಿಲ್ 25 ರಂದು ನಿಗದಿಪಡಿಸಿದ್ದ ಚುನಾವಣೆಯನ್ನು ಕೊರೊನಾ ಸೋಂಕಿನ ಕಾರಣ ಮುಂದೂಡಲಾಗಿತ್ತು. ಇದೀಗ ಸಹಕಾರ ಚುನಾವಣಾ ಆಯೋಗವು ಜುಲೈ 13ಕ್ಕೆ ಚುನಾವಣೆ ಪ್ರಕ್ರಿಯೆ ಯಾವ ಹಂತದಲ್ಲಿ ನಿಂತಿತ್ತೋ ಅಲ್ಲಿಂದ 20 ರಿಂದ 45 ದಿನಗಳ ಒಳಗೆ ಸಂಪೂರ್ಣ ಪ್ರಕ್ರಿಯೆ ಪೂರ್ಣಗೊಳಿಸಲು ಆದೇಶಿಸಿದೆ. ಈ ಪ್ರಯುಕ್ತ ಅಕ್ಟೋಬರ್ 20 ರಂದು ಚುನಾವಣೆ ನಡೆಸುವಂತೆ ಚುನಾವಣಾಧಿಕಾರಿಯನ್ನು ಕೋರಲು ನಿರ್ಧರಿಸಲಾಗಿದೆ ಎಂದು ಕಾರ್ಖಾನೆಯ ವ್ಯವಸ್ಥಾಪಕ ನಿರ್ದೇಶಕ ತಿಳಿಸಿದ್ದಾರೆ.

ಚುನಾವಣೆಯಲ್ಲಿ ಮತದಾನದ ಅರ್ಹತೆ ಪಡೆಯಲು ಸುಸ್ತಿದಾರ ಸದಸ್ಯರು ಸೆಪ್ಟೆಂಬರ್ 27ರ ಒಳಗೆ ಕಾರ್ಖಾನೆಯ ಆಡಳಿತ ಕಚೇರಿಯಲ್ಲಿ ಬಾಕಿ ಮೊತ್ತವನ್ನು ಪಾವತಿಸಬೇಕು ಎಂದು ಕೋರಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು