ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೈಲು ನಿಲ್ದಾಣದಲ್ಲಿ ಎನ್.ಎಸ್.ಯು.ಐ ಪ್ರತಿಭಟನೆ

Last Updated 28 ಮಾರ್ಚ್ 2023, 15:15 IST
ಅಕ್ಷರ ಗಾತ್ರ

ಬೀದರ್‌: ಕಾಂಗ್ರೆಸ್‌ ಯುವ ನಾಯಕ ರಾಹುಲ್ ಗಾಂಧಿ ಅವರನ್ನು ಸಂಸದರ ಸ್ಥಾನದಿಂದ ವಜಾ ಮಾಡಿರುವುದನ್ನು ಖಂಡಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ ಬೀದರ್ ಜಿಲ್ಲಾ ಘಟಕದ ಕಾರ್ಯಕರ್ತರು ನಗರ ರೈಲು ನಿಲ್ದಾಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಎನ್.ಎಸ್.ಯು.ಐ. ಜಿಲ್ಲಾ ಘಟಕದ ಅಧ್ಯಕ್ಷ ಸಚಿನ್ ಮಲ್ಕಾಪೂರೆ ನೇತೃತ್ವದಲ್ಲಿ ಕಾರ್ಯಕರ್ತರು ಮಚಲಿಪಟ್ಟಣಮ ರೈಲು ತಡೆದು ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ಅವರ ಸದಸ್ಯತ್ವ ರದ್ದುಗೊಳಿಸಿರುವುದು ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ರಾಹುಲ್ ಗಾಂಧಿ ಅವರನ್ನು ರಾಜಕೀಯವಾಗಿ ಎದುರಿಸಲಾಗದ ಕುತಂತ್ರ ರಾಜಕಾರಣ ಮಾಡಲಾಗಿದೆ ಎಂದು ಮಲ್ಕಾಪುರೆ ಆರೋಪಿಸಿದರು.

ಎನ್.ಎಸ್.ಯು.ಐ. ಜಿಲ್ಲಾ ಘಟಕದ ಉಪಾಧ್ಯಕ್ಷ ರತ್ನದೀಪ ಕಸ್ತೂರೆ, ವಿಲ್ಸನ್ ಡೋಣೆ, ಲೋಕೇಶ ಡುಮ್ಮೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ, ಶಂಕರ ಪಾಟೀಲ್, ಸಂತೋಷ ಚಿಮ್ಮಕೋಡ, ಹರಿದೇವ, ಸಚಿನ್ ಚಲ್ವಾ, ಕೃಷ್ಣ ಮೇತ್ರೆ, ಚಂದು ಡಿ.ಕೆ., ಹಾಗೂ ಲೋಕೇಶ ಗುಪ್ತಾ, ಶ್ರೀಕಾಂತ ರೆಡ್ಡಿ, ಪಂಢರಿ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT