ಭಾನುವಾರ, 16 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಾಲ್ಕಿ: ರಾಜಕಾಲುವೆ ಸ್ವಚ್ಛತೆಗೆ ಮುಂದಾದ ಅಧಿಕಾರಿಗಳು

Published 7 ಜೂನ್ 2024, 16:13 IST
Last Updated 7 ಜೂನ್ 2024, 16:13 IST
ಅಕ್ಷರ ಗಾತ್ರ

ಭಾಲ್ಕಿ: ಇಲ್ಲಿಯ ಬಸ್ ನಿಲ್ದಾಣ ಸಮೀಪದ ರಾಜಕಾಲುವೆ ಸ್ವಚ್ಛತೆಗೆ ಪುರಸಭೆ ಅಧಿಕಾರಿಗಳು ಮುಂದಾಗಿದ್ದು, ಸ್ವಚ್ಛತಾ ಕಾರ್ಯ ಶುಕ್ರವಾರ ಆರಂಭಿಸಲಾಗಿದೆ.

ಮಳೆಗಾಲ ಸಮೀಪಿಸಿದರೂ ಪಟ್ಟಣದ ಬಸ್ ನಿಲ್ದಾಣ, ಬೀದರ್ ಬೇಸ್ ಬಡಾವಣೆ ಪಕ್ಕದಲ್ಲಿರುವ ರಾಜ ಕಾಲುವೆ ಸ್ವಚ್ಛಗೊಳಿಸಿಲ್ಲ. ಸಾರ್ವಜನಿಕರು ವಿಪರೀತ ಸೊಳ್ಳೆ ಕಾಟ ಸೇರಿದಂತೆ ಸಾಂಕ್ರಾಮಿಕ ರೋಗಗಳ ಭೀತಿಯಲ್ಲಿ ದಿನ ಕಳೆಯುತ್ತಿದ್ದು, ದುರವಸ್ಥೆ ಬಗ್ಗೆ ಅಧಿಕಾರಿಗಳನ್ನು ಶಪಿಸುತ್ತಿರುವ ಬಗ್ಗೆ ‘ಪ್ರಜಾವಾಣಿ’ಯ ಮೇ 28ರ ಸಂಚಿಕೆಯಲ್ಲಿ ‘ಮಳೆ‌ ಆರಂಭ: ಸ್ವಚ್ಛಗೊಳ್ಳದ ರಾಜಕಾಲುವೆ’ ಶೀರ್ಷಿಕೆ ಅಡಿಯಲ್ಲಿ ವರದಿ ಪ್ರಕಟಿಸಲಾಗಿತ್ತು.

ವರದಿಗೆ ಸ್ಪಂದಿಸಿದ ಅಧಿಕಾರಿಗಳು ಸ್ವಚ್ಛತೆ ಕಾರ್ಯ ಆರಂಭಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT