ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನೀರಿನ ಸಮಸ್ಯೆ ಪರಿಹಾರಕ್ಕೆ ಮುಂದಾದ ಅಧಿಕಾರಿಗಳು

Last Updated 12 ಮೇ 2021, 5:44 IST
ಅಕ್ಷರ ಗಾತ್ರ

ಭಾಲ್ಕಿ: ತಾಲ್ಲೂಕಿನ ತೇಗಂಪೂರ ಗ್ರಾಮದ ಕೆರೆಯಲ್ಲಿನ ತೆರೆದ ಬಾವಿಗೆ ಮಂಗಳವಾರ ಪಂಚಾಯತ್‌ ರಾಜ್‌ ಇಲಾಖೆ ಎಇಇ ಅಶೋಕ ಕಾಳಗಿ ನೇತೃತ್ವದ ಅಧಿಕಾರಿಗಳ ತಂಡ ಭೇಟಿ ನೀಡಿ ನೀರು ಶುದ್ಧೀಕರಣ ಘಟಕ ಸ್ಥಾಪನೆಗೆ ಸ್ಥಳ ಪರಿಶೀಲನೆ ನಡೆಸಿ, ಪೂಜೆ ಸಲ್ಲಿಸಿದರು.

ತೇಗಂಪೂರ ಗ್ರಾಮದ ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗುತ್ತಿರುವ ಕುರಿತು ‘ಪ್ರಜಾವಾಣಿ’ಯ ಮೇ 11ರ ಮಂಗಳವಾರದ ಸಂಚಿಕೆಯಲ್ಲಿ ‘ಕುಡಿಯಲು ಯೋಗ್ಯವಲ್ಲದ ಕೆರೆಯ ಬಾವಿ ನೀರು’ ಶೀರ್ಷಿಕೆ ಅಡಿಯಲ್ಲಿ ಸಮಸ್ಯೆಯ ವಿವರವಾದ ವರದಿ ಪ್ರಕಟಿಸಿತ್ತು.

ವರದಿಗೆ ಸ್ಪಂದಿಸಿದ ಅಧಿಕಾರಗಳು ಗ್ರಾಮಕ್ಕೆ ದೌಡಾಯಿಸಿ ಶೀಘ್ರದಲ್ಲಿ ಸಮಸ್ಯೆ ಪರಿಹಾರಕ್ಕೆ ಯತ್ನಿಸುವ ಭರವಸೆ ನೀಡಿದ್ದಾರೆ ಎಂದು ಗ್ರಾಮದ ಪ್ರಮುಖ ಶಿವಕುಮಾರ ತೇಗಂಪೂರ ತಿಳಿಸಿದ್ದಾರೆ.

ಅಧಿಕಾರಿಗಳಾದ ಸಂತೋಷ, ಯುವರಾಜ, ಪಿಡಿಒ ಯೇಸ್ತಾರಾಣಿ, ಮಹೇಶ ಪಾಟೀಲ, ನವನಾಥ ಪಾಟೀಲ, ರಮೇಶ ಬೆಲ್ದಾರ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT