ಶುಕ್ರವಾರ, ಸೆಪ್ಟೆಂಬರ್ 24, 2021
23 °C

ವಿರೋಧಿಸಿದ್ದ ಬಿಜೆಪಿಯಿಂದಲೇ ತೈಲ ಬೆಲೆ ಏರಿಕೆ: ಮಾಜಿ ಸಚಿವ ಮಹಾದೇವಪ್ಪ ಟೀಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೀದರ್: ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಇದ್ದಾಗ ತೈಲ ಬೆಲೆ ಏರಿಕೆಯನ್ನು ವಿರೋಧಿಸಿದ್ದ ಬಿಜೆಪಿ ಈಗ ತನ್ನದೇ ಆಡಳಿತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ನಿರಂತರ ಏರಿಕೆ ಮಾಡುತ್ತಿದೆ ಎಂದು ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ ಟೀಕಿಸಿದರು.

ಬಿಜೆಪಿ ಅಧಿಕಾರ ಅವಧಿಯಲ್ಲಿ ಈವರೆಗೆ 43 ಬಾರಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಿಸಿದೆ. ತೈಲ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನಸಾಮಾನ್ಯರ ಬದುಕು ಕಷ್ಟಕರವಾಗಿದೆ ಎಂದು ನಗರದ ಕಾಂಗ್ರೆಸ್ ಜಿಲ್ಲಾ ಘಟಕದ ಕಚೇರಿಯಲ್ಲಿ ಸೋಮವಾರ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಹೇಳಿದರು.

ಪ್ರಧಾನಿ ಮೋದಿ ಅವರು ಅಧಿಕಾರಿಗಳು ಹಾಗೂ ಕೆಲವೇ ಜನರ ಅಣತಿಯಂತೆ ನಡೆದುಕೊಳ್ಳುತ್ತಿದ್ದಾರೆ. ದೇಶದ ಸ್ಥಿತಿ ಅಧೋಗತಿಗೆ ಹೋಗುವ ದಿನಗಳು ದೂರವಿಲ್ಲ ಎಂದು ನುಡಿದರು.

ಕಾಂಗ್ರೆಸ್ ಕಾರ್ಯಕರ್ತರು ಪಕ್ಷದ ಸಂಘಟನೆ ಗಟ್ಟಿಗೊಳಿಸಲು ಪ್ರಯತ್ನಿಸಬೇಕು. ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಹಾಗೂ ವಿಧಾನಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಬೇಕು ಎಂದು ಕಿವಿಮಾತು ಹೇಳಿದರು.

ಕೆಪಿಸಿಸಿ ಸ್ವತ್ತುಗಳ ಸಮಿತಿಯ ಸದಸ್ಯ ರಾಜಶೇಖರ ಪಾಟೀಲ ಅಷ್ಟೂರ, ಮಾಜಿ ಕಾರ್ಯದರ್ಶಿ ಅಮೃತರಾವ್ ಚಿಮಕೊಡೆ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಿವರಾಜ ಹಾಸನಕರ್ ಮಾತನಾಡಿದರು.

ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಜಾಬಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮುಖಂಡರಾದ ಶಂಕರರಾವ್ ದೊಡ್ಡಿ, ಅಬ್ದುಲ್ ಮನ್ನಾನ್ ಸೇಠ್, ನಿಸಾರ್ ಅಹಮ್ಮದ್, ಸಂಜಕುಮಾರ ಡಿ.ಕೆ., ಸಂಜಯ ಜಾಗಿರದಾರ್, ವಿದ್ಯಾಸಾಗರ್ ಸಿಂಧೆ, ಪ್ರಶಾಂತ ದೊಡ್ಡಿ, ಮೋಹನ್ ಕಾಳೇಕರ್, ಜಾರ್ಜ್ ಫರ್ನಾಂಡೀಸ್ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು