ಭಾನುವಾರ, 13 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೀದರ್‌: ದಾಖಲೆಯಿಲ್ಲದ ₹1 ಕೋಟಿ ಮೌಲ್ಯದ ತಂಬಾಕು ಪದಾರ್ಥ ಜಪ್ತಿ

Published : 20 ಸೆಪ್ಟೆಂಬರ್ 2024, 16:12 IST
Last Updated : 20 ಸೆಪ್ಟೆಂಬರ್ 2024, 16:12 IST
ಫಾಲೋ ಮಾಡಿ
Comments

ಬೀದರ್‌: ವಾಣಿಜ್ಯ ತೆರಿಗೆ, ಪೊಲೀಸ್‌ ಮತ್ತು ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಚರಣೆ ನಡೆಸಿ ನಗರ ಹೊರವಲಯದ ಕೊಳಾರ ಕೈಗಾರಿಕಾ ಪ್ರದೇಶದ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ₹1 ಕೋಟಿ ಮೌಲ್ಯದ ತಂಬಾಕು ಪದಾರ್ಥ, ಪಾನ್‌ ಮಸಾಲ ಜಪ್ತಿ ಮಾಡಿದ್ದಾರೆ.

ಘಟನೆ ಸಂಬಂಧ ಲಾರಿ ಚಾಲಕ ಹಾಗೂ ಗೋದಾಮಿನ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ‘ಖಚಿತ ಮಾಹಿತಿ ಮೇರೆಗೆ ಗುರುವಾರ ದಾಳಿ ನಡೆಸಿದಾಗ ಗೋಡಂಬಿ ಪ್ಯಾಕೇಟ್‌ನಲ್ಲಿ ಸುಮಾರು 40 ವಿವಿಧ ಬ್ರಾಂಡ್‌ನ ತಂಬಾಕು ಹಾಗೂ ಕಚ್ಚಾ ವಸ್ತುಗಳನ್ನು ಸಂಗ್ರಹಿಸಿ ಇಡಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಯಾವುದೇ ದಾಖಲೆಗಳು ಇಲ್ಲದ ಕಾರಣ ಜಪ್ತಿ ಮಾಡಲಾಗಿದೆ’ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಾಣಿಜ್ಯ ತೆರಿಗೆ ಇಲಾಖೆಯ ಸಹಾಯಕ ಆಯುಕ್ತ ಮಹೇಶ್ ಪಾಟೀಲ, ಅಧಿಕಾರಿಗಳಾದ ಅಶೋಕ್ ಶಂಭುಲಿ, ಮಹೇಶ್ ಶೆಟ್ಟಿ, ಸಿಪಿಐ ವಿಜಯಕುಮಾರ್, ಆಹಾರ ಸುರಕ್ಷತಾ ಇಲಾಖೆಯ ಮನೋಹರ್ ಕಲಶೆಟ್ಟಿ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT