ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರೋಗ್ಯ ಶಿಬಿರ: 170 ಮಕ್ಕಳ ತಪಾಸಣೆ

Last Updated 25 ನವೆಂಬರ್ 2022, 14:25 IST
ಅಕ್ಷರ ಗಾತ್ರ

ಬೀದರ್: ಬಿಜೆಪಿ ವತಿಯಿಂದ ಭಾಲ್ಕಿ ತಾಲ್ಲೂಕಿನ ಆಳಂದಿ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ 170 ಮಕ್ಕಳ ಉಚಿತ ಆರೋಗ್ಯ ತಪಾಸಣೆ ಮಾಡಲಾಯಿತು.

ಮಕ್ಕಳ ತಜ್ಞ ಡಾ.ದಿನಕರ ಮೋರೆ ಅವರು ತಪಾಸಣೆ ಮಾಡಿದರು. ಆರೋಗ್ಯ ಸಮಸ್ಯೆ ಕಂಡು ಬಂದ ಮಕ್ಕಳಿಗೆ ಉಚಿತ ಔಷಧಿ ವಿತರಿಸಲಾಯಿತು.

ಬಡ ಜನರ ಅನುಕೂಲಕ್ಕಾಗಿ ಬಿಜೆಪಿ ವತಿಯಿಂದ ಮೊದಲ ಹಂತದಲ್ಲಿ ಭಾಲ್ಕಿ ತಾಲ್ಲೂಕಿನ ಮೆಹಕರ್, ಲಖನಗಾಂವ್, ಖಟಕಚಿಂಚೋಳಿ, ಹಲಬರ್ಗಾ, ನಿಟ್ಟೂರು ಹಾಗೂ ಮದಕಟ್ಟಿ ಹೋಬಳಿ ಕೇಂದ್ರ ಸ್ಥಾನಗಳಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ನಡೆಸಲಾಗಿದೆ ಎಂದು ಬಿಜೆಪಿ ಮುಖಂಡ ಡಾ.ರವಿರಾಜ ಮೋರೆ ತಿಳಿಸಿದರು.

ಎರಡನೇ ಹಂತದಲ್ಲಿ 40 ಗ್ರಾಮ ಪಂಚಾಯಿತಿಗಳ ಕೇಂದ್ರ ಸ್ಥಾನಗಳಲ್ಲಿ ಶಿಬಿರ ಆಯೋಜಿಸಲಾಗುತ್ತಿದೆ. ಈಗಾಗಲೇ ಭಾತಂಬ್ರಾ, ಗೋರಚಿಂಚೋಳಿ, ಆಳಂದಿ ಗ್ರಾಮಗಳಲ್ಲಿ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. ಶನಿವಾರ (ನ.26) ಚಳಕಾಪುರದಲ್ಲಿ ಶಿಬಿರ ನಡೆಯಲಿದೆ ಎಂದು ಹೇಳಿದರು.

ಗ್ರಾಮದ ಪ್ರಮುಖರು ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT