ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನ್ಯಾಯಾಲಯಗಳಲ್ಲಿ ರಾಷ್ಟ್ರ ಧ್ವಜಾರೋಹಣಕ್ಕೆ ಆದೇಶಿಸಿ

Last Updated 13 ಜುಲೈ 2021, 16:28 IST
ಅಕ್ಷರ ಗಾತ್ರ

ಬೀದರ್: ಸೆಪ್ಟೆಂಬರ್ 17 ರಂದು ಆಚರಿಸಲಾಗುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಸಂದರ್ಭದಲ್ಲಿ ನ್ಯಾಯಾಲಯಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡಲು ಆದೇಶಿಸಬೇಕು ಎಂದು ಭಾರತ ಸಂರಕ್ಷಣಾ ಸಮಿತಿ ಅಧ್ಯಕ್ಷ ಶಿವಶರಣಪ್ಪ ವಾಲಿ ಮನವಿ ಮಾಡಿದ್ದಾರೆ.

ದೇಶಕ್ಕೆ ಸ್ವಾತಂತ್ರ್ಯ ದೊರೆತ 13 ತಿಂಗಳ 2 ದಿನಗಳ ನಂತರ ಈ ಭಾಗಕ್ಕೆ ಸ್ವಾತಂತ್ರ್ಯ ಲಭಿಸಿತ್ತು. ಹೀಗಾಗಿ ಸೆಪ್ಟೆಂಬರ್ 17 ರಂದು ವಿಮೋಚನಾ ದಿನ ಆಚರಿಸುತ್ತ ಬರಲಾಗುತ್ತಿದೆ. ಆದರೆ, ಅಂದು ಕಲ್ಯಾಣ ಕರ್ನಾಟಕ ಭಾಗದ ನ್ಯಾಯಾಲಯಗಳಲ್ಲಿ ರಾಷ್ಟ್ರ ಧ್ವಜಾರೋಹಣ ಮಾಡುತ್ತಿಲ್ಲ ಎಂದು ರಾಜ್ಯಪಾಲರಿಗೆ ಬರೆದ ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಈ ಭಾಗದ ನಾಗರಿಕರ ಭಾವನೆಗಳಿಗೆ ಸ್ಪಂದಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬೇಡಿಕೆ ಮಂಡಿಸಿದ್ದಾರೆ.
ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೂ ಪ್ರತ್ಯೇಕ ಮನವಿ ಪತ್ರ ಸಲ್ಲಿಸಿ, ಸೆ.17 ರಂದು ಕಲ್ಯಾಣ ಕರ್ನಾಟಕದ ಎಲ್ಲ ನ್ಯಾಯಾಲಯಗಳಲ್ಲಿ ಧ್ವಜಾರೋಹಣಕ್ಕೆ ಕಟ್ಟುನಿಟ್ಟಿನ ಆದೇಶ ಹೊರಡಿಸಬೇಕು ಎಂದು ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT