ಬುಧವಾರ, ಅಕ್ಟೋಬರ್ 20, 2021
24 °C

ಬೂತ್ ಮಟ್ಟದಿಂದ ಪಕ್ಷ ಸಂಘಟಿಸಿ: ಬಿಜೆಪಿ ಮುಖಂಡ ಡಿ.ಕೆ.ಸಿದ್ರಾಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಭಾಲ್ಕಿ: ತಾಲ್ಲೂಕಿನ ಧನ್ನೂರು-ಹಲಬರ್ಗಾ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಕೋನಮೇಳಕುಂದಾ, ರುದನೂರ್‌, ಧನ್ನೂರು ಸೇರಿ ವಿವಿಧ ಗ್ರಾಮಗಳಲ್ಲಿ ಬಿಜೆಪಿ ತಾಲ್ಲೂಕು ಘಟಕದ ವತಿಯಿಂದ ಹಮ್ಮಿಕೊಂಡ ಬೂತ್ ಅಧ್ಯಕ್ಷರ ಮನೆಗೆ ನಾಮಫಲಕ ಅಳವಡಿಸುವ ಅಭಿಯಾನಕ್ಕೆ ಬಿಜೆಪಿ ಮುಖಂಡ ಡಿ. ಕೆ.ಸಿದ್ರಾಮ ಚಾಲನೆ ನೀಡಿದರು.

ಬಳಿಕ ಮಾತನಾಡಿದ ಅವರು,‘ಬಿಜೆಪಿ ಶಕ್ತಿ ಇರುವುದು ಬೂತ್ ಮಟ್ಟದಲ್ಲಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆ ಯಾವಾಗ ಬೇಕಾದರೂ ಘೋಷಣೆ ಆಗಬಹುದು. ಈಗಿನಿಂದಲೇ ಸಿದ್ಧತೆ ಮಾಡಿಕೊಂಡು ಬೂತ್ ಮಟ್ಟದಲ್ಲಿ ಕಾರ್ಯಕರ್ತರು ಪಕ್ಷ ಸಂಘಟಿಸಬೇಕು. ಬಡವರು, ಮಹಿಳೆಯರು, ದೀನ–ದಲಿತರು, ಅಶಕ್ತರ ಅಭ್ಯುದಯಕ್ಕೆ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಹಲವು ಯೋಜನೆಗಳನ್ನು ಜಾರಿಗೆ ತಂದಿವೆ. ಅವುಗಳನ್ನು ಪ್ರತಿಯೊಬ್ಬರಿಗೂ ತಲುಪಿಸುವ ಕೆಲಸ ಮಾಡಬೇಕು’ ಎಂದು ತಿಳಿಸಿದರು.

ತಾಲ್ಲೂಕು ಘಟಕದ ಅಧ್ಯಕ್ಷ ಪಂಡಿತ ಶಿರೋಳೆ, ಪ್ರಮುಖರಾದ ವೀರಶೆಟ್ಟಿ ಪಟ್ಟೆ, ಡಿ.ಕೆ.ಗಣಪತಿ, ಶ್ರೀಕಾಂತ ದಾನಿ, ಸಂತೋಷ ಜ್ಯಾಂತಿ, ಸಿಕ್ರೇಶಡಪಾಟೀಲ, ಉದಯ ಮೂಲಗೆ, ಏಕನಾಥ ಮೇತ್ರೆ, ಪಿಂಟು ಠಾಕೂರ್, ಸಿದ್ದು ಕಾಡಾದಿ ಹಾಗೂ ಜೈಭೀಮ ಅವರು ಈ ವೇಳೆ ಕಾರ್ಯಕ್ರಮದಲ್ಲಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು